ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಪ್ರಳಯ ಸೃಷ್ಟಿಸಿದ ವರುಣ ಗುರುವಾರ ಶಾಂತಗೊಂಡಿದ್ದಾನೆ.
ಗುಲ್ಬರ್ಗಾದಲ್ಲಿ ಅಲ್ಪ ಪ್ರಮಾಣದ ಮಳೆ ಸುರಿಯುತ್ತಿದೆ. ಉಳಿದ ಜಿಲ್ಲೆಗಳಲ್ಲಿ ಮಳೆ ನಿಂತಿದ್ದು, ಜನ ಜೀವನ ಸಹಜಸ್ಥಿತಿಯತ್ತ ಮರಳುತ್ತಿದೆ.
ಅತಿವೃಷ್ಟಿಗೆ ತುತ್ತಾದ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಮೊದಲು ಹುಬ್ಬಳ್ಳಿ-ಧಾರವಾಡ ಜಿಲ್ಲೆಯಲ್ಲಿ ಆಸ್ತಿ ಪಾಸ್ತಿನಷ್ಟವನ್ನು ಅಂದಾಜು ಮಾಡಿದರು.
ರಾಜ್ಯ ಅತಿವೃಷ್ಟಿಗೆ ತುತ್ತಾಗಿ ಸಂಕಷ್ಟದಲ್ಲಿದ್ದರೂ ಕೇಂದ್ರ ಸರ್ಕಾರ ನಷ್ಟವನ್ನು ಅಂದಾಜು ಮಾಡಲು ತಂಡವನ್ನು ಕಳುಹಿಸಿಲ್ಲ, ನೆರವು ನೀಡುವ ಬಗ್ಗೆ ಭರವಸೆ ನೀಡದೆ ಮಲತಾಯಿ ಧೋರಣಿಯನ್ನು ತೋರುತ್ತಿದೆ ಎಂದು ಉಪ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.
ರಾಜ್ಯದಲ್ಲಿ ವಿರೋಧ ಪಕ್ಷವಾದ ಕಾಂಗ್ರೆಸ್ ಸಹಾ ರಾಜ್ಯದ ಜನತೆಗೆ ಕೇಂದ್ರದಿಂದ ಪರಿಹಾರ ದೊರಕಿಸಿಕೊಡುವಲ್ಲಿ ಒತ್ತಡ ತರಲು ಮುಂದಾಗುತ್ತಿಲ್ಲ ಎಂದು ಹೇಳಿದ್ದಾರೆ.
ಅತಿವೃಷ್ಟಿಗೆ ತುತ್ತಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯಕ್ರಮಗಳಿಗಾಗಿ ಸೇನೆಯ ನೆರವು ಪಡೆಯಲಾಗುತ್ತಿದೆ.
|