ಆಡಳಿತಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲಗೊಂಡಿದೆ ಎಂದು ಆರೋಪಿಸಿದ ಕಾಂಗ್ರೆಸ್ ಪಕ್ಷ ಗುರುವಾರ ರಾಜ್ಯಪಾಲರಿಗೆ ಈ ಸಂಬಂಧ ದೂರು ನೀಡಿದೆ.
ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರ ನೇತೃತ್ವದ ನಿಯೋಗ ಗುರುವಾರ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ಭೇಟಿ ಮಾಡಿ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿದರು.
ತಮಿಳುನಾಡು ಬಸ್‌ಗೆ ಬೆಂಕಿ, ಆ ರಾಜ್ಯದ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಮಗಳು ಸೆಲ್ವಿ ಅವರ ಮನೆ ಮೇಲೆ ದಾಳಿ, ಉತ್ತರ ಕರ್ನಾಟಕ ಮಳೆ ಹಾವಳಿಗೆ ತುತ್ತಾಗಿದ್ದರೂ ಪರಿಹಾರ ಕಾರ್ಯಕ್ರಮಗಳನ್ನು ಕೈಗೊಳ್ಳುವಲ್ಲಿ ಸರ್ಕಾರದ ನಿರ್ಲಕ್ಷ್ಯ ಮುಂತಾದ ವಿಷಯಗಳನ್ನು ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ.
ಅಧಿಕಾರ ಹಸ್ತಾಂತರ ಕುರಿತಂತೆ ಕಿತ್ತಾಟದಲ್ಲಿರುವ ಸರ್ಕಾರದ ಅಂಗ ಪಕ್ಷಗಳು ರಾಜ್ಯದ ಅಭಿವೃದ್ದಿಯತ್ತ ಗಮನ ಹರಿಸುತ್ತಿಲ್ಲ ಎಂದು ದೂರು ನೀಡಿದ್ದಾರೆ.
|