ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಅಧಿಕಾರ ಹಸ್ತಾಂತರಕ್ಕೆ ಸಂಬಂಧಪಟ್ಟಂತೆ ಪ್ರಮುಖ ಮುಖಂಡರ ಹೇಳಿಕೆಗಳು ಹೊರಬಿದ್ದಿವೆ.
ಅಧಿಕಾರ ಹಸ್ತಾಂತರ ಬೇಷರತ್ತಾಗಿ ನಡೆಯುತ್ತದೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಅಧಿಕಾರ ಹಸ್ತಾಂತರಕ್ಕೆ ಷರತ್ತು ವಿದಿಸುತ್ತಾರೆಂಬ ವರದಿ ಮಾಧ್ಯಮಗಳಲ್ಲಿ ಬಂದಿರಬಹುದು, ಅಂಥ ಯಾವುದೇ ಷರತ್ತು ಹಾಕಿಲ್ಲ ಎಂದು ಸಷ್ಟಪಡಿಸಿದ್ದಾರೆ.
ಬಿಜೆಪಿ ಮುಖಂಡರೊಂದಿಗೆ ನೇರವಾಗಿ ಚರ್ಚೆ ನಡೆಸುವ ಮೂಲಕ ಅಧಿಕಾರ ಹಸ್ತಾಂತರ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ.
ಜೆಡಿಎಸ್ ಅಪ್ಪ ಮಕ್ಕಳ ಪಕ್ಷ ಎಂದು ಟೀಕಿಸುವವರ ವಿರುದ್ಧ ಹರಿಹಾಯ್ದರು. ತಮ್ಮದು ವ್ಯಕ್ತಿ ಆಧಾರಿತ ಪಕ್ಷವಲ್ಲ, ಯಾವುದೇ ವ್ಯಕ್ತಿಯೊಬ್ಬನ ಶ್ರೇಯಸ್ಸಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹೋಗುತ್ತಿಲ್ಲ. ಪಕ್ಷ ಅಪ್ಪನದೂ ಅಲ್ಲ, ಮಗನದೂ ಅಲ್ಲ ಎಂದು ತಿಳಿಸಿದ್ದಾರೆ.
|