ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರದ ಅಧಿಕಾರ ಬಿಜೆಪಿಗೆ ಹಸ್ತಾಂತರಿಸುವ ಕಾರ್ಯದಲ್ಲಿ ಯಾವ ಅಡಚಣೆಯೂ ಆಗುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಮುಖಂಡ ವೆಂಕಯ್ಯನಾಯ್ಡು ಶನಿವಾರ ಹೇಳಿದ್ದಾರೆ. ಭೋಪಾಲ್ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿಗೆ ಅಧಿಕಾರ ಹಸ್ತಾಂತರಗೊಳಿಸಲಿದ್ದಾರೆ ಎಂಬ ವಿಶ್ವಾಸ ತಮಗಿದೆ ಎಂದಿದ್ದಾರೆ.
ಬಿಜೆಪಿಗೆ ಹೆಚ್ಚು ಸಂಖ್ಯೆಯ ಶಾಸಕರಿದ್ದರೂ ಮೊದಲು ಜೆಡಿಎಸ್ ನೇತೃತ್ವದಲ್ಲಿ ಸರ್ಕಾರ ನಡೆಸಲು ಅವಕಾಶ ಮಾಡಿಕೊಟ್ಟಿದ್ದೇವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಹೆಚ್ಚು ಸ್ಥಾನಗಳು ದೊರೆಯಲಿದ್ದು ತಮ್ಮ ಪಕ್ಷವೇ ಸ್ವತಂತ್ರವಾಗಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಹೇಳಿದ್ದಾರೆ.
|