ಜಿಲ್ಲೆಯ ಗಂಗಾವತಿಯಲ್ಲಿ ಗಣಪತಿ ವಿಗ್ರಹ ವಿಸರ್ಜನೆ ಸಂದರ್ಭದಲ್ಲಿ ಗುಂಪು ಘರ್ಷಣೆ ಸಂಭವಿಸಿದೆ. ವಿಗ್ರಹ ವಿಸರ್ಜನೆಗೆ ತೆರಳುತ್ತಿದ್ದ ಮೆರವಣಿಗೆ ಮೇಲೆ ಕಲ್ಲು ಹಾಗೂ ಚಪ್ಪಲಿ ತೂರಾಟ ನಡೆದಿದೆ ಎಂದು ಆರೋಪಿಸಿ ಯುವಕರ ಗುಂಪು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿತು.
ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು.
ಆದರೆ ಮತ್ತೊಂದು ಕೋಮಿನ ಜನರು ತಾವು ಕಲ್ಲು ತೂರಾಟ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಸ್ತೆಯಲ್ಲೇ ಬಿಟ್ಟಿದ್ದ ಗಣಪತಿ ವಿಗ್ರಹದ ವಿಸರ್ಜನೆಯನ್ನು ಪೊಲೀಸರೇ ನೆರವೇರಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಬೀಡುಬಿಟ್ಟಿದ್ದು ಪರಿಸ್ಥಿತಿ ಶಾಂತವಾಗಿದೆ.
ಅದೇ ರೀತಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚಿಕ್ಕಅಂಕನಹಳ್ಳಿಯಲ್ಲಿ ಗಣಪತಿ ವಿಸರ್ಜನೆ ವೇಳೆ ಗುಂಪು ಘರ್ಷಣೆ ಸಂಭವಿಸಿದೆ.
ಕಲ್ಲು ತೂರಾಟ ನಡೆದು, ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ 9 ಜನರನ್ನು ಬಂಧಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪಾಂಡವಪುರ ಉಪ ವಿಭಾಗಾಧಿಕಾರಿ ಪೂರ್ಣಿಮಾ ತಿಳಿಸಿದ್ದಾರೆ.
|