ಬಿಜೆಪಿ ಜತೆ ಸೇರಿ ಸಮ್ಮಿಶ್ರ ಸರ್ಕಾರ ರಚಿಸಿ ಆಡಳಿತ ನಡೆಸುತ್ತಿರುವ ಜೆಡಿಎಸ್ ಬಿಜೆಪಿಬಗ್ಗೆ ಮತ್ತೆ ಅಪಸ್ವರವೆತ್ತಿದೆ.
ಬಿಜೆಪಿ ಸಖ್ಯದಿಂದಾಗಿ ಜೆಡಿಎಸ್ ಅಲ್ಪ ಸಂಖ್ಯಾತ ಮತಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮೆರಾಜುದ್ದೀನ್ ಪಟೇಲ್ ಹೇಳಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ಅವರು ಬಳ್ಳಾರಿಯಲ್ಲಿ ಮಾತನಾಡಿ, ಬಿಜೆಪಿ ಜೊತೆ ಸಖ್ಯ ಬೆಳೆಸಿದ್ದಕ್ಕಾಗಿ ಮುಸ್ಲಿಂ ಸಮುದಾಯದವರು ಜೆಡಿಎಸ್ ಬಗ್ಗೆ ಮುನಿಸಿಕೊಂಡಿದ್ದರು.
ಅದನ್ನು ಸರಿಪಡಿಸಲು ತಮ್ಮನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಹೇಳಿದ್ದಾರೆ.
ಮೊದಲು ಪಕ್ಷದ ಪರ ವಿಶ್ವಾಸ ವ್ಯಕ್ತಪಡಿಸಲು ಹಿಂದೇಟು ಹಾಕುತ್ತಿದ್ದ ಮುಸ್ಲಿಮರು ಪಕ್ಷದ ಅಭಿವೃದ್ದಿ ಪರ ಚಿಂತನೆ ನೋಡಿ ಮತ್ತ ಪಕ್ಷಕ್ಕೆ ಮರಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.
|