ಕರ್ನಾಟಕದಲ್ಲಿ ತಲೆ ಎತ್ತುತ್ತಿರುವ ಉಗ್ರಗಾಮಿ ಹಾಗೂ ನಕ್ಸಲೀಯರ ಚಟುವಟಿಕೆಗಳನ್ನು ನಿಗ್ರಹಿಸಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಬಿಜೆಪಿ ರಾಷ್ಟ್ತ್ರೀಯ ಕಾರ್ಯಕಾರಿಣಿ ಸದಸ್ಯ ಹಾಗೂ ವಿಧಾನಪರಿಷತ್ ಶಾಸಕ ಅರವಿಂದ್ ಲಿಂಬಾವಳಿ ಆಗ್ರಹಿಸಿದ್ದಾರೆ. ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದ ಪಕ್ಷದ ರಾಷ್ಟ್ತ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕ ಉಗ್ರಗಾಮಿಗಳು ಅಡಗು ತಾಣವಾಗುತ್ತಿದೆ. ಮಲೆನಾಡು ಪ್ರದೇಶದಲ್ಲಿ ಹೆಚ್ಚುತ್ತಿರುವ ನಕ್ಸಲೀಯರ ಚಟುವಟಿಕೆ ಹತ್ತಿಕ್ಕಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ನೆರವು ನೀಡಬೇಕು. ರಾಜ್ಯದ ಗುಪ್ತಚರ ಇಲಾಖೆಯನ್ನು ಬಲಪಡಿಸಲು ಮುಂದಾಗಬೇಕು ಎಂದು ಅವರು ಕೋರಿದ್ದಾರೆ.
ನಕ್ಸಲರ ವಿಷಯಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಮಾತನಾಡಿದ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಮುಖ್ಯವಾಹಿನಿಗೆ ಬರಲಿಚ್ಚಿಸುವ ನಕ್ಸಲರು ನೇರವಾಗಿ ನ್ಯಾಯಾಲಯಕ್ಕೆ ಹಾಜರಾಗಬಹುದು ಎಂದು ಹೇಳಿದ್ದಾರೆ.
|