ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಚಾರ ಬಿರುಸುಗೊಂಡಿದೆ. ಹಾಗೇ ರಾಜಕೀಯ ಪಕ್ಷಗಳ ಆರೋಪ ಪ್ರತ್ಯಾರೋಪಗಳು ಮುಗಿಲು ಮುಟ್ಟಿವೆ.
ಸಮ್ಮಿಶ್ರ ಸರ್ಕಾರ ಆಡಳಿತ ಯಂತ್ರಾಂಗವನ್ನು ಚುನಾವಣೆಗಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಸಮ್ಮಿಶ್ರ ಸರ್ಕಾರದ ಅಂಗಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ ಹಣಬಲ ಮತ್ತು ತೋಲ್ಬಳದಿಂದ ಚುನಾವಣೆಯಲ್ಲಿ ಜಯಗಳಿಸಲು ವಿಫಲ ಯತ್ನ ನಡೆಸುತ್ತಿದೆ ಎಂದು ಟೀಕಿಸಿದ್ದಾರೆ.
ಆ ಎರಡು ಪಕ್ಷಗಳ ಧೋರಣೆಯನ್ನು ಗಮನಿಸುತ್ತಿದ್ದರೆ ನ್ಯಾಯಯುತವಾಗಿ ಹಾಗೂ ಮುಕ್ತವಾಗಿ ಚುನಾವಣೆ ನಡೆಯುವುದಿಲ್ಲ ಎಂಬ ಭೀತಿ ತಮಗಿದೆ ಎಂದು ಹೇಳಿದ್ದಾರೆ.
ಗುಲ್ಬರ್ಗಾದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ವಿರೋಧ ಪಕ್ಷದ ನಾಯಕ ಧರಂಸಿಂಗ್ ಅವರು ಅಕ್ಟೋಬರ್ ನಂತರ ರಾಜ್ಯದಲ್ಲಿ ತೀವ್ರ ಬದಲಾವಣೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯ ಹಾಗೂ ಶ್ರೀನಿವಾಸಪ್ರಸಾದ್ ಮಂಗಳವಾರ ಮತಯಾಚನೆ ಮಾಡಿದರೆ ಹುಬ್ಬಳ್ಳಿಯಲ್ಲಿ ಮಾಜಿ ಸಚಿವೆ ರಾಣಿ ಸತೀಶ್ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದಾರೆ. ಮೈಸೂರಿನಲ್ಲಿ ಜಿಲ್ಲಾಉಸ್ತು ವಾರಿ ಸಚಿವ ಜಿ.ಟಿ.ದೇವೇಗೌಡ ಪ್ರಚಾರ ನಡೆಸಿದ್ದಾರೆ.
|