ಅಕ್ಟೋಬರ್ ಮೂರರಂದು ಸಮ್ಮಿಶ್ರ ಸರಕಾರದ ಪಾಲುದಾರ ಪಕ್ಷ ಬಿಜೆಪಿಗೆ ಮುಖ್ಯಮಂತ್ರಿ ಪದವಿ ನೀಡಿ ತಾವು ಅಧಿಕಾರದಿಂದ ಕೆಳಗೆ ಇಳಿಯುವುದಾಗಿ ಗುರುವಾರ ತಾವು ನೀಡಿದ ಹೇಳಿಕೆಯನ್ನು ಅಲ್ಲಗಳೆದಿದ್ದಾರೆ.
ಅಕ್ಟೋಬರ್ 3ರಂದು ಅಧಿಕಾರದಿಂದ ಕುಮಾರಸ್ವಾಮಿ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ ಎಂಬ ಹೇಳಿಕೆ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಇಂದು ತಮ್ಮ ಅಧಿಕೃತ ನಿವಾಸದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಕೆಲವು ಮಾಧ್ಯಮಗಳಲ್ಲಿ ಪ್ರಕಟವಾದಂತೆ ತಾವು ಅಕ್ಟೋಬರ್ 3ರಂದು ಅಧಿಕಾರ ಹಸ್ತಾಂತರ ಮಾಡುವುದಿಲ್ಲ. ಮತ್ತು ಆ ರೀತಿಯ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
ಸೆಪ್ಟಂಬರ್, 30ರಂದು ಜೆಡಿಎಸ್ ಶಾಸಕಾಂಗ ಸಭೆ ನಡೆಯಲಿದ್ದು, ಆ ನಂತರವಷ್ಟೆ ಅಧಿಕಾರ ಹಸ್ತಾಂತರದ ಕುರಿತು ತೀರ್ಮಾನ ತೆಗೆದುಕೊಳ್ಳುವುದಾಗಿ ಅವರು ಹೇಳಿದರು.
|