ರಾಜ್ಯದ 209 ನಗರ ಸ್ಥಳೀಯ ಸಂಸ್ಥೆಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಹಲವಾರು ಕಾರಣಗಳಿಂದ ಮತದಾನ ನಡೆಯದ 15 ಮತಗಟ್ಟೆಗಳಲ್ಲಿ ಶನಿವಾರ ಮರು ಮತದಾನ ಶಾಂತಿಯುತವಾಗಿ ನಡೆದಿದೆ.
ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದ ಬಳ್ಳಾರಿಯಲ್ಲೂ ಮರುಮತದಾನ ನಡೆಯುತ್ತಿದೆ. ಶುಕ್ರವಾರ ನಡೆದ ಮತದಾನದ ಸಂದರ್ಭದಲ್ಲಿ ಮೈಸೂರಿನ 13ನೇ ವಾರ್ಡಿನ ಸುಮಾರು 500 ಜನರ ಹೆಸರು ಮತಪಟ್ಟಿಯಿಂದ ನಾಪತ್ತೆಯಾಗಿರುವುದನ್ನು ಖಂಡಿಸಿ ತಮಗೆ ಮತದಾನಕ್ಕೆ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿ ಸುಮಾರು ಸಾವಿರ ಜನರು ರಸ್ತೆ ತಡೆ ನಡೆಸುತ್ತಿದ್ದಾರೆ.
ರಾತ್ರಿಎಲ್ಲಾ ರಸ್ತೆಯಲ್ಲೇ ಅಡುಗೆ ಮಾಡಿ ಅಲ್ಲೇ ಅಹೋರಾತ್ರಿ ಭಜನೆ ಮುಂತಾದ ಕಾಯಕ್ರಮಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಮತಪಟ್ಟಿಯಲ್ಲಿ ಹೆಸರಿಲ್ಲದವರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂದು ಚುನಾವಣಾ ಅಧಿಕಾರಿಗಳು ಕೈಚೆಲ್ಲಿ ಕುಳಿತಿದ್ದಾರೆ.
ರಾಜ್ಯ ಚುನಾವಣಾ ಆಯೋಗವೊಂದೇ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳುತ್ತಿದ್ದಾರೆ.
ಪ್ರತಿಭಟನೆಯಿಂದಾಗಿ ಮೈಸೂರು-ಎಚ್.ಡಿ.ಕೋಟೆ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ವಾಹನಗಳು ರಿಂಗ್ ರಸ್ತೆಮೂಲಕ ಸಂಚರಿಸುತ್ತಿವೆ.
|