ಕರ್ನಾಟಕ ವಿಧಾನಪರಿಷತ್ ಸಭಾಪತಿ ಪ್ರೊ. ಬಿ.ಕೆ. ಚಂದ್ರಶೇಖರ್ ಕಾಮನ್‌ವೆಲ್ತ್ ಸಂಸದೀಯ ಸಂಘಟನೆಯ ಭಾರತ ಪ್ರತಿನಿಧಿಯಾಗಿ ಆಯ್ಕೆ ಯಾಗಿದ್ದಾರೆ.
ದೆಹಲಿಯಲ್ಲಿ ನಡೆದ ಸಿಪಿಎ 53ನೇ ಸಮ್ಮೇಳನದಲ್ಲಿ ಅವರನ್ನು ಪ್ರತಿನಿಧಿಯಾಗಿ ಆಯ್ಕೆ ಮಾಡಲಾಗಿದೆ.
ಅವರು ಮೂರು ವರ್ಷಗಳ ಅವಧಿಗೆ ಈ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ. ಇದೊಂದು ಗೌರವಯುತ ಹುದ್ದೆಯಾಗಿದ್ದು ತಾವು ಆ ಹುದ್ದೆಗೆ ಆಯ್ಕೆಯಾಗಿದ್ದು ಸಂತಸ ತಂದಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾತಂತ್ರ ವ್ಯವಸ್ಥೆಯನ್ನು ಕುರಿತ ಚರ್ಚೆಯಲ್ಲಿ ಭಾರತದ ಪ್ರತಿನಿಧಿಯಾಗಿ ತಮಗೆ ಭಾಗವಹಿಸುವ ಸುವರ್ಣ ಅವಕಾಶ ದೊರೆತಿರುವುದು ತಮ್ಮ ಅದೃಷ್ಟ ಎಂದು ಹೇಳಿದ್ದಾರೆ.
|