ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚು ಸ್ಥಾನಗಳು ಲಭಿಸಲು ಆ ಪಕ್ಷ ಅಧಿಕಾರದಲ್ಲೇ ಇರುವುದು ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿಶ್ಲೇಷಿಸಿದ್ದಾರೆ.
ತಮ್ಮ ಪಕ್ಷಕ್ಕೆ ಕಡಿಮೆ ಸ್ಥಾನಗಳು ಲಭಿಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು ವಿರೋಧ ಪಕ್ಷವಾಗಿದ್ದರೂ ಅನೇಕ ವಾರ್ಡ್‌ಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಯಾರ ಜೊತೆಯೂ ಕೈಜೋಡಿಸದೆ, ಏಕಾಂಗಿಯಾಗಿ ತಾವು ಈ ಪ್ರಮಾಣದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಜಯಗಳಿಸಿರುವುದು ತಮಗೆ ಹೆಮ್ಮೆ ಎನಿಸಿದೆ ಎಂದಿದ್ದಾರೆ. ಕೆಲ ಕಡೆ ಜೆಡಿಎಸ್ ಅಭ್ಯರ್ಥಿಗಳೂ ಸಹಾ ಮಣ್ಣು ಮುಕ್ಕಿದ್ದಾರೆ ಎಂದು ಹೇಳಿದ ಅವರು ಜನ ನಮ್ಮ ಪಕ್ಷವನ್ನು ತಿರಸ್ಕರಿಸಿಲ್ಲ, ಆದರೆ ಜನರ ತೀರ್ಮಾನಕ್ಕೆ ತಲೆ ಬಾಗುವುದಾಗಿ ಹೇಳಿದ್ದಾರೆ.
|