ಸಚಿವರಾಗಿದ್ದ ಶ್ರೀರಾಮುಲು ಹಾಗೂ ವಿಧಾನಪರಿಷತ್ ಸದಸ್ಯ ಜನಾರ್ದನ ರೆಡ್ಡಿ ಮೇಲೆ ಗುಂಡಿನ ದಾಳಿ ನಡೆದ ಹಿನ್ನೆಲೆಯಲ್ಲಿ ಉದ್ವಿಗ್ನಗೊಂಡಿದ್ದ ಬಳ್ಳಾರಿ ಮತ್ತೊಮ್ಮೆ ಕ್ಷುಲ್ಲಕ ಕಾರಣಕ್ಕೆ ಉದ್ವಿಗ್ನಗೊಂಡಿದೆ.
ಮಹಾನಗರ ಪಾಲಿಕೆಯ ವಾರ್ಡೊಂದಕ್ಕೆ ಸ್ಪರ್ಧಿಸಿದ್ದ ಬಿಜೆಪಿಯ ಅಭ್ಯರ್ಥಿಯೊಬ್ಬ ಕೋಮೊಂದರ ವಿರುದ್ಧ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆಂದು ಆರೋಪಿಸಿ ಗುಂಪೊಂದು ಶನಿವಾರ ರಾತ್ರಿ ದಾಂಧಲೆ ನಡೆಸಿದ್ದರಿಂದ ಬಳ್ಳಾರಿಯಲ್ಲಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದೆ. ಲಾಠಿ ಪ್ರಹಾರ ನಡೆಸಿ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಆದರು ಇನ್ನೂ ಉದ್ವಿಗ್ನ ಪರಿಸ್ಥಿತಿ ಇದೆ. ಬಳ್ಳಾರಿ ನಗರದ ಬ್ರೂಸ್ ಪೇಟೆ ರಸ್ತೆಯಲ್ಲಿರುವ ಬೆಂಕಿಮಾರೆಮ್ಮ ಗುಡಿಬಳಿ ಶನಿವಾರ ರಾತ್ರಿ ಗೊಂಪೊಂದು ರಸ್ತೆ ತಡೆ ನಡೆಸಿ ಕೋಮೊಂದನ್ನು ನಿಂದಿಸಿದ ಬಿಜೆಪಿ ಅಭ್ಯರ್ಥಿಯನ್ನು ಪ್ರತಿಭಟನಾ ಸ್ಥಳಕ್ಕೆ ಹಾಜರುಪಡಿಸಲೇ ಬೇಕೆಂದು ಪಟ್ಟು ಹಿಡಿದ ಪ್ರತಿಭಟನಾಕಾರರು ಎರಡು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದರು. ಮನವೊಲಿಸಲು ಪೊಲೀಸ್ ಅಧಿಕಾರಿಗಳು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಪ್ರತಿಭಟನಾಕಾರರು ಕಲ್ಲು ತೂರಲಾರಂಭಿಸಿದ್ದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿತು. ಅದರಿಂದ ಪೊಲೀಸರು ಲಾಠಿಪ್ರಹಾರ ನಡೆಸಿ ಪ್ರತಿಭಟನಾ ಕಾರರನನ್ನು ಚದುರಿಸಿದರೂ ಉದ್ರಿಕ್ತ ಪರಿಸ್ಥಿತಿ ಮುಂದುವರೆದಿದೆ.
|