ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಜೆಡಿಎಸ್‌ಗೆ ಕಾಂಗ್ರೆಸ್ ಬಾಹ್ಯ ಬೆಂಬಲ?
ಹಸ್ತಾಂತರ ಪ್ರಹಸನ: ಬಿಜೆಪಿ ಸಚಿವರ ಸಾಮೂಹಿಕ ರಾಜೀನಾಮೆ
ಉಪಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಸಚಿವರು ಮಂಗಳವಾರ ರಾತ್ರಿ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದು, ಅಕ್ಟೋಬರ್ 5ರವರೆಗೆ ಕಾಯುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈ ಸಚಿವರಿಗೆ ಸಲಹೆ ಮಾಡಿದ್ದಾರೆ.

ಯಡಿಯೂರಪ್ಪ ನೇತೃತ್ವದಲ್ಲಿ 18 ಸಚಿವರು ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ರಾತ್ರಿ 8.15ಕ್ಕೆ ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು.

ಒಪ್ಪಂದದಂತೆ ಅಕ್ಟೋಬರ್ 3 ಅಂದರೆ ಬುಧವಾರ ಅಧಿಕಾರ ಹಸ್ತಾಂತರಿಸಬೇಕಾದ ಕುಮಾರಸ್ವಾಮಿ ಈ ಬಗ್ಗೆ ತೀರ್ಮಾನವನ್ನು ತಮ್ಮ ಪಕ್ಷದ ವರಿಷ್ಠರಿಗೆ ಬಿಟ್ಟಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಅಕ್ಟೋಬರ್ ಐದರವರೆಗೂ ಕಾಯಿರಿ ಎಂದು ಅವರು ಯಡಿಯೂರಪ್ಪ ಅವರಿಗೆ ಸಲಹೆ ಮಾಡಿದ್ದಾರೆ. ಆದರೆ ದೋಸ್ತಿ ಸರ್ಕಾರದ ಮಧ್ಯೆ ಅಸಮಾಧಾನ ಮುಗಿಲು ಮುಟ್ಟಿದ್ದು, ಇಂದು ಹಲವು ಬೆಳವಣಿಗೆಗಳು ನಡೆಯುವ ಸಾಧ್ಯತೆಯಿದೆ.

ಜೆಡಿಎಸ್ ಪರ ಮತ್ತೊಮ್ಮೆ ಕಾಂಗ್ರೆಸ್ ಒಲವು:
ಈ ನಡುವೆ ಕಾಂಗ್ರೆಸ್ ಕಾದು ನೋಡುವ ತಂತ್ರವನ್ನು ಅನುಸರಿಸುತ್ತಿದ್ದು, ಜೆಡಿಎಸ್‌ಗೆ ಬಾಹ್ಯ ಬೆಂಬಲ ನೀಡುವ ನಿಟ್ಟಿನಲ್ಲಿ ಅದು ಚಿಂತನೆ ನಡೆಸಿದೆ. ವಿದೇಶದಲ್ಲಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಕ್ಟೋಬರ್ 5ರಂದು ಮರಳಲಿದ್ದು, ಆ ಬಳಿಕ ಈ ಕುರಿತು ಸ್ಪಷ್ಟ ತೀರ್ಮಾನ ಹೊರಬೀಳಲಿದೆ. ಅಂತೆಯೇ ಜೆಡಿಎಸ್ ಸಭೆಯೂ ಅದೇ ದಿನ ನಡೆಯಲಿದ್ದು ಕುತೂಹಲ ಮೂಡಿಸಿದೆ.

ಮಂಗಳವಾರ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ದಿನವಿಡೀ ರಾಜಕೀಯ ಬೆಳವಣಿಗೆಗಳು ನಡೆದವು. ಜೆಡಿಎಸ್ ಈ ಹಿಂದೆ ಮಾಡಿಕೊಂಡ ಒಪ್ಪಂದದಂತೆ ಅಧಿಕಾರ ಹಸ್ತಾಂತರಿಸುವುದು ಅನಿವಾರ್ಯ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಹೊತ್ತಿರುವ ಹಿರಿಯ ನಾಯಕ ಯಶವಂತ ಸಿನ್ಹಾ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ಮತ್ತಷ್ಟು
ಬೆಂಗಳೂರಿನ ಯೋಧನ ಆತ್ಮಹತ್ಯೆ
ಕರುಣಾನಿಧಿ ವಿರುದ್ಧ ರಾಜ್ಯದಲ್ಲೂ ಕೇಸು ದಾಖಲು
ಬಳ್ಳಾರಿ ನೆಪ: ಬಿಗಡಾಯಿಸಿದ ಪರಿಸ್ಥಿತಿ
ಅಧಿಕಾರ ಹಸ್ತಾಂತರ ಅವಾಂತರ
ಕರ್ನಾಟಕದಲ್ಲಿ ಜೆಡಿಎಸ್ ಅಧಿಪತ್ಯ
ಜೆಡಿಎಸ್ ರಾಗ ಬದಲು