ಅಚ್ಚರಿದಾಯಕ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ, ತುರ್ತಾಗಿ ಸಚಿವ ಸಂಪುಟದ ಸಭೆಯನ್ನು ಕರೆದಿದ್ದು, ರಾಜಕೀಯ ವಲಯದಲ್ಲಿ ಕುತೂಹಲಕಾರಿ ಬೆಳವಣಿಗೆಯಾಗಿದ್ದು, ಶುಕ್ರವಾರ ನಡೆಯುವ ಸಚಿವ ಸಂಪುಟದ ಸಭೆಯಲ್ಲಿ ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚಿಸುವ ಮೂಲಕ ಮಿತ್ರ ಪಕ್ಷ ಬಿಜೆಪಿಯನ್ನು ಇಕ್ಕಟಿನಲ್ಲಿ ಸಿಲುಕಿಸುವ ಭಾರಿ ತಂತ್ರವನ್ನು ಉಪಯೋಗಿಸಿದ್ದಾರೆ.
ಮುಂಜಾನೆ 9-30ಕ್ಕೆ ಸಚಿವ ಸಂಪುಟದ ಸಭೆಯನ್ನು ಕರೆಯಲಾಗಿದ್ದು, ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಬಿಜೆಪಿ ತೆಗೆದುಕೊಂಡಿರುವ ಏಕಪಕ್ಷೀಯ ನಿರ್ಧಾರ, ಸಚಿವ ಸಂಪುಟದ ಸಭೆ ಕರೆಯುವುದಕ್ಕೆ ಕುಮಾರಸ್ವಾಮಿ ಅವರಿಗೆ ಕಾರಣವಾಗಿರುವ ಸಾಧ್ಯತೆ ಇದೆ.
ಬಲ್ಲ ಮೂಲಗಳ ಪ್ರಕಾರ ಸಚಿವ ಸಂಪುಟದ ತುರ್ತು ಸಭೆಯ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆಗೆ ಮುಂದಾಗಲಿದ್ದಾರೆ ಎಂದು ವರದಿಯಾಗಿದೆ. ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆಗೆ ಏಕೆ ಮುಂದಾಗಿದ್ದಾ ರೆ ಎಂದು ತಿಳಿದು ಬಂದಿಲ್ಲ. ಆಡಳಿತಾರೂಡ ಸಮ್ಮಿಶ್ರ ಪಕ್ಷದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಕೂಡ ವಿಶ್ವಾಸ ಮತಯಾಚನೆಯನ್ನು ಮಂಡಿಸಿರಲಿಲ್ಲ.
ಇದೇ ಸಮಯದಲ್ಲಿ ಉಪ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಹಿತ ರಾಜ್ಯ ಮುಖಂಡರು ದೆಹಲಿಯಲ್ಲಿ ನಡೆಯುತ್ತಿರುವ ಪಕ್ಷದ ಸಂಸದೀಯ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದಾರೆ.
ಅಧಿಕಾರ ಹಸ್ತಾಂತರ ವಿಳಂಬವಾಗುತ್ತಿದ್ದಂತೆ ಮಿತ್ರ ಪಕ್ಷ ಬಿಜೆಪಿಯ ಸಚಿವರುಗಳು ಸಾಮೂಹಿಕ ರಾಜೀನಾಮೆ ಸಲ್ಲಿಸಿ, ನಿತ್ಯ ಕೆಲಸದಿಂದ ದೂರ ಉಳಿದಿದ್ದಾರೆ.
|