ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಬಿಜೆಪಿ ವೃಥಾರೋಪ: ಎಂ.ಪಿ.ಪ್ರಕಾಶ್ ಕಿಡಿ
ಜೆಡಿಎಸ್ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಬಿಜೆಪಿ ಹೊರಿಸುತ್ತಿದೆ ಎಂದು ಗೃಹ ಸಚಿವ ಎಂ.ಪಿ.ಪ್ರಕಾಶ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಬಿಜೆಪಿಯ ಟೀಕೆಗಳಲ್ಲಿ ಯಾವುದೇ ಹುರುಳಿಲ್ಲ ಎಂದರು.

ಕುಮಾರಸ್ವಾಮಿ ಆಡಳಿತದ ಬಗ್ಗೆ ರಾಜ್ಯದ ಜನತೆ ಅಭಿಮಾನ ಪಟ್ಟಿದೆ. ಇತ್ತೀಚೆಗೆ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಜೆಡಿಎಸ್ ಗೆಲುವೇ ಇದಕ್ಕೆ ಸಾಕ್ಷಿ. ಈ ಹಿನ್ನೆಲೆಯಲ್ಲಿ ಮತ್ತೆ ಮುಂದಿನ ಅವಧಿಗೂ ಅವರೇ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವದರಲ್ಲಿ ಯಾವುದೇ ತಪ್ಪಿಲ್ಲ ಎಂದರು.

ಇಂದು ಸಂಜೆ ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರ ಸಭೆಯನ್ನುದ್ದೇಶಿಸಿ ಪಕ್ಷದ ವರಿಷ್ಠ ದೇವೇಗೌಡರು ಮಾತನಾಡಲಿದ್ದಾರೆ. ಎಲ್ಲರ ಸಚಿವರು, ಶಾಸಕರು, ಕಾರ್ಯಕರ್ತರ ಅಭಿಪ್ರಾಯವನ್ನು ಕೇಳಲಾಗುವುದು. ಅಂತಿಮವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.
ಮತ್ತಷ್ಟು
ಕುಮಾರಸ್ವಾಮಿಯೇ ಸಿಎಂ: ಒತ್ತಡ ಹೇರಲು ಜೆಡಿಎಸ್ ನಿರ್ಧಾರ
ಶುಕ್ರವಾರ ಸಚಿವ ಸಂಪುಟ ಸಭೆ
ಚೌಕಾಸಿ ವ್ಯಾಪಾರಕ್ಕೆ ಅವಕಾಶವಿಲ್ಲ: ಬಿಜೆಪಿ
ಸಿಎಂ ಮನೆಯಲ್ಲಿ ಜೆಡಿಎಸ್ ಮಹತ್ವದ ಸಭೆ
ಕರ್ನಾಟಕ ಬಿಕ್ಕಟ್ಟು: ಬಿಜೆಪಿ ಸಂಸದಿಯ ಸಭೆ
ಅಗರವಾಲ್‌‍ಗೆ ರಾಮಸೇತು ವಿಚಾರಣೆ ಬೇಡ