ಮುಖ್ಯಮಂತ್ರಿ ಕುಮಾರಸ್ವಾಮಿ ಗುರುವಾರ ರಾತ್ರಿ ದಿಢೀರನೇ ರಾಜ್ಯಪಾಲರನ್ನು ಭೇಟಿಯಾಗಿದ್ದು, ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದಂತೆ ಇದು ಕುತೂಹಲ ಮೂಡಿಸಿದೆ.
ಮೈತ್ರಿ ಪಕ್ಷ ಬಿಜೆಪಿ, ಪ್ರತಿ ಪಕ್ಷ ಕಾಂಗ್ರೆಸ್ ಕೂಡ ಅಚ್ಚರಿ ವ್ಯಕ್ತಪಡಿಸಿದ್ದು, ಇಂದು ಕಾಂಗ್ರೆಸ್ ನಿಯೋಗವೂ ರಾಜ್ಯಪಾಲರನ್ನು ಭೇಟಿ ಮಾಡಲಿದೆ ಎಂದು ತಿಳಿದುಬಂದಿದೆ. ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ನಡೆಯುವ ಭಾರೀ ಬದಲಾವಣೆ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ನಿಯೋಗದಿಂದ ರಾಜ್ಯಪಾಲರನ್ನು ಭೇಟಿಯಾಗುವ ಕಾರ್ಯಕ್ರಮವಿದೆ.
ಮಾಧ್ಯಮ ಮಂದಿಯೂ ನೂರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಈ ಸಂಧರ್ಭದಲ್ಲಿ ಮುಖ್ಯಮಂತ್ರಿ ತೆರಳಿದ ಸ್ಥಳಕ್ಕೆ ಜಮಾಯಿಸಿದರು. ರಾಜ್ಯಪಾಲರನ್ನು ಭೇಟಿಯಾದ ಮುಖ್ಯಮಂತ್ರಿ ಈ ಭೇಟಿಗೆ ಹೆಚ್ಚಿನ ಅರ್ಥ ನೀಡಬೇಕಾಗಿಲ್ಲ ಎಂದಷ್ಟೇ ಹೇಳಿ ತೆರಳಿದರು.
ಈ ಘಟನೆಯಿಂದ ಕಾಂಗ್ರೆಸ್ ವಲಯದಲ್ಲಿ ಹೆಚ್ಚಿನ ಉತ್ಸುಕತೆ ಕಂಡು ಬಂತು. ರಾತೋರಾತ್ರಿ ಕೆಪಿಸಿಸಿ ಅಧ್ಯಕ್ಷ ಖರ್ಗೆ ಸೇರಿದಂತೆ ಹಲವು ಪ್ರಮುಖ ಕಾಂಗ್ರೆಸ್ ನಾಯಕರು ನಗರದ ಹೋಟೆಲ್ ಒಂದರಲ್ಲಿ ತಮ್ಮ ಮುಂದಿನ ಕಾರ್ಯ ತಂತ್ರದ ಬಗ್ಗೆ ಚರ್ಚೆ ನಡೆಸಿದರೆನ್ನಲಾಗಿದೆ.
|