ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕನ್ನಡ ಸಾಹಿತ್ಯ ಪರಿಷತ್ ನೌಕರರು ನಡೆಸುತ್ತಿರುವ ಪ್ರತಿಭಟನೆ 8ನೇ ದಿನಕ್ಕೆ ಕಾಲಿಟ್ಟಿದೆ.
ಸರ್ಕಾರಿ ನೌಕರರೆಂದು ಪರಿಗಣಿಸಿ 5ನೇ ವೇತನ ಆಯೋಗವನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕನ್ನಡ ಸಾಹಿತ್ಯ ಪರಿಷತ್ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಸರ್ಕಾರ ಇನ್ನೂ ಸ್ಪಂದಿಸಿಲ್ಲ.
ಒಂದೆಡೆ ಅಧಿಕಾರ ಹಸ್ತಾಂತರದ ಕಾವು ಮುಗಿಲುಮುಟ್ಟಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಇವರಿಗೆ ತಮ್ಮ ಬೇಡಿಕೆ ಈಡೇರುವ ಬಗ್ಗೆ ಯಾವುದೇ ಭರವಸೆಯಿಲ್ಲ.
ಆದರೆ ಸಂಸ್ಥೆಯ ನೌಕರರ ಪ್ರತಿಭಟನೆಗೆ ಸ್ವತಃ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರೇ ಬೆಂಬಲ ಸೂಚಿಸದಿರುವುದು ಕುತೂಹಲಕ್ಕೆ ಎಡೆ ಮಾಡಿದೆ.
ಈ ನಡುವೆ ಹೋರಾಟಕ್ಕೆ ಸಾಹಿತಿಗಳಾದ ಸಿ .ವೀರಣ್ಣ,ರಾಜ್ಯ ರಸ್ತೆ ಸಾರಿಗೆ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ವ.ಚ.ಚೆನ್ನೇಗೌಡ ಪರಿಷತ್ ನೌಕರರ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ ಎಂದಿದ್ದಾರೆ.
|