ಶುಕ್ರವಾರ ದೀಡೀರನೇ ಮುಖ್ಯಮಂತ್ರಿ ಕುಮಾರಸ್ವಾಮಿ ತುರ್ತು ಸಚಿವ ಸಂಪುಟ ಸಭೆಯನ್ನು ಕರೆದಿದ್ದು ಬಿಜೆಪಿ ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ತುರ್ತು ಸಚಿವ ಸಂಪುಟ ಕರೆಯುವ ಉದ್ದೇಶ ಏನಿತ್ತು ಎಂದು ಅದು ಪ್ರಶ್ನಿಸಿದೆ. ಗುರುವಾರ ನಡೆದ ಜಾತ್ಯಾತೀತ ಜನತಾದಳ ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಪಕ್ಷದ ವರಿಷ್ಠ ದೇವೇಗೌಡರು ಮೈತ್ರಿ ಪಕ್ಷ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ.
ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೆಡಿಎಸ್ ಪಕ್ಷಕ್ಕಾಗಿ ತಾನು ವಚನ ಭ್ರಷ್ಟರಾಗಲು ಸಿದ್ಧ ಎಂದು ಘೋಷಿಸಿದ್ದಾರೆ.
ಇದು ಮೈತ್ರಿ ಸರ್ಕಾರದ ನಡುವೆ ಬಿರುಕಿಗೆ ಸ್ಪಷ್ಟ ಸೂಚನೆಯಾಗಿದ್ದು, ಯಾವುದೇ ಕ್ಷಣದಲ್ಲಿ ಸರ್ಕಾರ ಪತನಗೊಳ್ಳುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿಯ ಬಗ್ಗೆ ಉಪ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವ ಡಿ.ಎಚ್.ಶಂಕರಮೂರ್ತಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
|