ಮುಖ್ಯಮಂತ್ರಿ ಕುಮಾರಸ್ವಾಮಿ, ಸಾರಿಗೆ ಸಚಿವ ಚೆಲುವರಾಯಸ್ವಾಮಿ ಮತ್ತು 32 ಮಂದಿ ಜೆಡಿಎಸ್ ಶಾಸಕರ ಸದಸ್ಯತ್ವ ಅನರ್ಹಗೊಳಿಸುವಂತೆ ಕೋರಿ ವಿಧನಾಸಭಾಧ್ಯಕ್ಷರಿಗೆ ಸಲ್ಲಸಿರುವು ಅರ್ಜಿಯ ವಿಚಾರಣೆ ಶನಿವಾರ ನಡೆಯಲಿದೆ.
ವಾಟಾಳ್ ಪಕ್ಷದ ವಾಟಾಳ್ ನಾಗರಾಜ್, ಆರ್ಪಿಐನ ರಾಜೇಂದ್ರನ್ ಮತ್ತು ಸಿಪಿಎಂನ ಜಿ.ವಿ. ಶ್ರೀರಾಮರೆಡ್ಡಿ ಅವರು ಜೆಡಿಎಸ್ ಶಾಸಕರ ವಿಧಾನಸಭಾ ಸದಸ್ಯತ್ವ ಅನರ್ಹಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು.
ದೋಸ್ತಿ ಸರ್ಕಾರ ಪತನದ ಅಂಚಿಗೆ ತಲುಪಿರುವ ಹಿನ್ನೆಲೆಯಲ್ಲಿ ಈ ಸಭೆ ನಡೆಯುತ್ತದೋ ಇಲ್ಲವೋ ಎಂಬುದೇ ಕುತೂಹಲದ ಸಂಗತಿ. ಕಳೆದ ತಿಂಗಳು ವಿಚಾರಣೆಗೆ ದಿನಾಂಕ ನಿಗದಿ ಯಾಗಿದ್ದರೂ ವಿಧಾನಸಭಾಧ್ಯಕ್ಷ ಕೃಷ್ಣ ಬರಲೇಇಲ್ಲ.
ಅ. 6ಕ್ಕೆ ವಿಚಾರನಾ ದಿನಾಂಕ ನಿಗದಿಯಾಗಿದೆ ಎಂದು ಸಚಿವಾಲಯದ ಅಧಿಕಾರಿಗಳುತಿಳಿಸಿದ್ದಾರೆ. ಕಾಂಗ್ರೆಸ್ ಜತೆ 20 ತಿಂಗಳ ಹಿಂದೆ ಸಂಬಂಧ ಕಡಿದು ಬಿಜೆಪಿ ಜತೆ ಮೈತ್ರಿ ಸಾಧಿಸಿ ಸರ್ಕಾರ ರಚಿಸಿದಾಗ ಮುವರು ಶಾಸಕರು ಅನರ್ಹಗೊಳಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು.
ಇದಕ್ಕೆ ಕಾರಣ ಅಂದು ಜೆಡಿಎಸ್ ರಾಷ್ಟ್ತ್ರೀಯ ಅಧ್ಯಕ್ಷರು 32 ಶಾಸಕರನ್ನು ಪಕ್ಷದಿಂದ ಉಚ್ಛಾಟಿಸುವುದಾಗಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು.
ಈ ಹಿನ್ನೆಲೆಯಲ್ಲಿ ಶಾಸಕರನ್ನು ಅನರ್ಹಗೊಳಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು.
|