ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಬಿಜೆಪಿ ಸಚಿವರುಗಳ ರಾಜೀನಾಮೆ ಸ್ವೀಕಾರ
ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಭಾರತೀಯ ಜನತಾಪಕ್ಷದ 18 ಸಚಿವರುಗಳ ರಾಜೀನಾಮೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸ್ವೀಕರಿಸಿ ಮುಂದಿನ ಕ್ರಮಕ್ಕೆ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರಿಗೆ ಕಳುಹಿಸಿಕೊಟ್ಟಿದ್ದಾರೆ

ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜೀನಾಮೆ ಪತ್ರಗಳನ್ನು ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿದೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕುಮಾರಸ್ವಾಮಿ ಅವರು ರಾಜ್ಯಪಾಲರನ್ನು ಭೇಟಿಯಾಗಿ ವಿಶ್ವಾಸ ಮತಯಾಚನೆಗೆ ಅವಕಾಶ ನೀಡಬೇಕು ಎಂದು ಕೇಳಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಸಂವಿಧಾನದ ಪ್ರಕಾರ ವಿಶ್ವಾಸಮತ ಪರೀಕ್ಷೆಗೆ ಅವಕಾಶ ನೀಡಬೇಕು ಎಂದು ಕೇಳಿಕೊಳ್ಳಲಿದ್ದಾರೆ. ರಾಜ್ಯಪಾಲರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳಲಾರರು ಎಂದು ಭರವಸೆ ಇದೆ ಎಂದು ಹೇಳಿದ್ದಾರೆಂದು ವರದಿಯಾಗಿದೆ.

ಇದೆ ಸಮಯದಲ್ಲಿ ಕಾಂಗ್ರೆಸ್ ಕೂಡ ತನ್ನ ಚಟುವಟಿಕೆ ಪ್ರಾರಂಭಿಸಿದ್ದು, ಪರ್ಯಾಯ ಸರಕಾರ ರಚನೆಯ ಸಾಧ್ಯತೆಗಳನ್ನು ಶೋಧಿಸುತ್ತಿದೆ. ಬಿಜೆಪಿ ನಾಯಕರು, ರಾಜ್ಯಪಾಲರಿಗೆ ಬೆಂಬಲ ಹಿಂತೆಗೆದುಕೊಳ್ಳುವ ಪತ್ರ ನೀಡಿದ ಕೆಲವೇ ಕ್ಷಣಗಳಲ್ಲಿ ಮಾಜಿ ಸ್ಪೀಕರ್ ರಮೇಶ ಕುಮಾರ ಅವರ ನೇತೃತ್ವದ ಕಾಂಗ್ರೆಸ್ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ಪರ್ಯಾಯ ಸರಕಾರ ರಚನೆಯ ಸಮಯದಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಕೇಳಿಕೊಂಡಿದ್ದಾರೆ.

ದೆಹಲಿ ವರದಿ
ರಾಜ್ಯದಲ್ಲಿ ಆಗಿರುವ ಬೆಳವಣಿಗೆಗಳನ್ನು ಗಮನಿಸುತ್ತಿರುವ ಕಾಂಗ್ರೆಸ್ ಹೈಕಮಾಂಡ್, ಕುಮಾರಸ್ವಾಮಿ ಸರಕಾರ ಅಲ್ಪಮತಕ್ಕೆ ಇಳಿದ ನಂತರ ರಾಜ್ಯದ ನಾಯಕರೊಂದಿಗೆ ಮುಂದಿನ ತಂತ್ರಗಳ ಕುರಿತು ಮಾತುಕತೆ ನಡೆಸಲು ಪಕ್ಷದ ಜನರಲ್ ಸೆಕ್ರೆಟರಿ ಪೃಥ್ವಿರಾಜ್ ಚೌಹಾನ್ ಅವರನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಚೌಹಾನ್ ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ಸೋಮವಾರ ರಾಜ್ಯದ ನಾಯಕರೊಂದಿಗೆ ಚರ್ಚಿಸುವುದಾಗಿ ಹೇಳಿದ್ದಾರೆ.
ಮತ್ತಷ್ಟು
ಚುನಾವಣೆಗೆ ಜೆಡಿಎಸ್ ಒಲವು
29ರಂದು ನೈಸ್ ಅರ್ಜಿ ವಿಚಾರಣೆ
ನಾವು ಪಾಠ ಕಲಿತೆವು: ಯಶವಂತ ಸಿನ್ಹಾ
ನರ್ಸಿಂಗ್ ಶಿಕ್ಷಣ ಸಂಸ್ಥೆಗಳಿಗೆ ನೋಟಿಸ್
ರಾಜ್ಯ ರಾಜಕೀಯ : ಮುಂದೇನು?
ಅಧಿಕಾರಕ್ಕಾಗಿ ಕೆಸರೆರಚಾಟ