ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ರಾಜ್ಯದಲ್ಲಿ ಕೇಂದ್ರಾಡಳಿತಕ್ಕೆ ಕಾಂಗ್ರೆಸ್ ಒತ್ತಾಯ
ಬಿಜೆಪಿ ಬೆಂಬಲವನ್ನು ಹಿಂದಕ್ಕೆ ಪಡೆದಿದ್ದರಿಂದ ಕುಮಾರಸ್ವಾಮಿ ಸರಕಾರ ಅಲ್ಪಮತಕ್ಕೆ ಇಳಿದಿದ್ದು, ಸರಕಾರವನ್ನು ವಜಾ ಮಾಡಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡುವಂತೆ ಕೇಂದ್ರ ಸರಕಾರವನ್ನು ಕೇಳಿಕೊಳ್ಳಬೇಕೆಂದು ಕಾಂಗ್ರೆಸ್, ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ರಾಜ್ಯ ಕಾಂಗ್ರೆಸ್ ನಾಯಕರು ಕೇಳಿಕೊಂಡಿದ್ದಾರೆ.

ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ಸೋಮವಾರ ಮದ್ಯಾಹ್ನ ಭೇಟಿಯಾದ ಎಐಸಿಸಿ ಜನರಲ್ ಸೆಕ್ರೆಟರಿ ಪೃಥ್ವಿರಾಜ್ ಚೌಹಾನ್ ಅವರು, ಕುಮಾರಸ್ವಾಮಿ ಸರಕಾರವನ್ನು ತಕ್ಷಣ ಜಾರಿಗೆ ಬರುವಂತೆ ವಜಾಮಾಡಬೇಕು ಎಂದು ಕೇಳಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಚೌಹಾನ್ ಅವರು, ಕುಮಾರಸ್ವಾಮಿ ಸರಕಾರ ಅಲ್ಪಮತಕ್ಕೆ ಇಳಿದಿರುವುದರಿಂದ ಅಧಿಕಾರದಿಂದ ಕೆಳಗೆ ಇಳಿಯಬೇಕು ಎಂದು ಹೇಳಿದರು.

ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರನ್ನು ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ನೇತೃತ್ವದ ನಿಯೋಗ ಎರಡನೆ ಬಾರಿ ಭೇಟಿಯಾಗಿ ಮಾತುಕತೆ ನಡೆಸಿ, ರಾಷ್ಟ್ರಪತಿ ಆಡಳಿತವನ್ನು ಜಾರಿಗೆ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ. ಅಲ್ಲದೆ ಕಾಂಗ್ರೆಸ್‌ನ ಎಲ್ಲ ಶಾಸಕರು ನಾವು ಯಾವುದೇ ಸರಕಾರವನ್ನು ಬೆಂಬಲಿಸುವುದಿಲ್ಲ ಎಂದು ರಾಜ್ಯಪಾಲರಿಗೆ ಸಲ್ಲಿಸಿರುವ ಪ್ರತ್ಯೇಕ ಪತ್ರಗಳ ಮೂಲಕ ಸ್ಪಷ್ಟಪಡಿಸಿದ್ದಾರೆ.
ಮತ್ತಷ್ಟು
ಗೌಡರ ಕುಟುಂಬ ಪ್ರಹಾರ: ಚಿಗಿತುಕೊಂಡ ಗಣಿ ರೆಡ್ಡಿ
ಜೆಡಿಎಸ್ ವರ್ತನೆ: ರಾಜ್ಯಾದ್ಯಂತ ಪ್ರತಿಭಟನೆ ಧ್ವನಿ
ದಸರಾ ಉದ್ಘಾಟನೆಗೆ ಬಾಲಗಂಗಾಧರನಾಥ ಶ್ರೀ
ಯಡಿಯೂರಪ್ಪ ವಿರುದ್ಧ ಬಿಜೆಪಿಯಲ್ಲೇ ಸಂಚು: ಸಿಎಂ
'ದ್ರೋಹ' ವಿರುದ್ಧ ಮನೆಮನೆ ಪ್ರಚಾರ: ಯಡಿಯೂರಪ್ಪ
ಸಿಎಂ ರಾಜೀನಾಮೆಗೆ ಆಗ್ರಹ