ಸುಮಾರು 15 ದಿನಗಳಿಂದ ನಡೆಯುತ್ತಿದ್ದ ರಾಜಕೀಯ ನಾಟಕಕ್ಕೆ ತೆರೆಎಳೆದ ಮುಖ್ಯಮಂತ್ರಿ ಕುಮಾರಸ್ವಾಮಿ ಸೋಮವಾರ ತಮ್ಮ ಪದವಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಕುಮಾರಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಬಹುಮತ ಸಾಬೀತಿಗೆ ಅಗತ್ಯವಾದ ಶಾಸಕರ ಸಂಖ್ಯೆ ಇಲ್ಲದಿರುವುದರಿಂದ ರಾಜೀನಾಮೆ ನೀಡುವಂತೆ ರಾಜ್ಯಪಾಲರು ಕುಮಾರಸ್ವಾಮಿಗೆ ಸೂಚಿಸಿದ್ದರೆಂದು ರಾಜಭವನದ ಮೂಲಗಳು ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆಂದು ಹೇಳಲಾಗಿದೆ.
ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಅಂತಿಮವಾಗಿ ತಿಳಿಸಿದ್ದು ರಾಜ್ಯಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಡಳಿತ ಹೇರುವಂತೆ ಆಗ್ರಹಿಸಿತ್ತು. ರಾಜ್ಯಪಾಲರು ಕಾನೂನು ತಜ್ಞರನ್ನು ಸಂಪರ್ಕಿಸಿದ್ದರಲ್ಲದೇ ಮುಖ್ಯಮಂತ್ರಿ ಜತೆ ಮಾತುಕತೆಯನ್ನೂ ನಡೆಸಿದರು.
ಜೆಡಿಎಸ್ ಅಧಿಕಾರ ಹಸ್ತಾಂತರಕ್ಕೆ ವಿಫಲವಾದ್ದರಿಂದ ಬಿಜೆಪಿ ಸರ್ಕಾರಕ್ಕೆ ತನ್ನ ಬೆಂಬಲ ವಾಪಸು ತೆಗೆದುಕೊಂಡಿತು. ಎರಡು ಕಾಂಗ್ರೆಸ್ ನಿಯೋಗಗಳು ರಾಜ್ಯಪಾಲರನ್ನು ಭೇಟಿ ಮಾಡಿ ಕುಮಾರಸ್ವಾಮಿ ಸರ್ಕಾರ ಬಹುಮತ ಕಳೆದುಕೊಂಡಿರುವುದರಿಂದ ಸರ್ಕಾರವನ್ನು ವಜಾ ಮಾಡುವಂತೆ ಆಗ್ರಹಿಸಿದ್ದರು.
|