ಸದ್ಯಕ್ಕೆ ರಾಜ್ಯ ವಿಧಾನಸಭೆ ಅಮಾನತ್ತಿನಲ್ಲಿದ್ದು, ರಾಷ್ಟ್ತ್ರಪತಿ ಆಳ್ವಿಕೆ ಜಾರಿಗೆ ಬಂದಿರುವುದರಿಂದ ಈ ಬಾರಿಯ ದಸರಾ ಮಹೋತ್ಸವದಲ್ಲಿ ಜಂಬೂ ಸವಾರಿಯ ಉದ್ಘಾಟನೆಯನ್ನು ರಾಜ್ಯಪಾಲ ರಾಮೇಶ್ವರ್ ಠಾಕೂರ್ ಅವರು ನೆರವೇರಿಸಲಿದ್ದಾರೆ.
ರಾಜ್ಯಪಾಲರು ಜಂಬೂಸವಾರಿಯನ್ನು ಉದ್ಘಾಟಿಸಿದನಂತರ ಅ. 21ರ ವೇಳೆಗೆ ರಾಜ್ಯದ ರಾಜಕೀಯ ಪರಿಸ್ಥಿತಿ ಬದಲಾಗಿ, ಸರ್ಕಾರ ಅಸ್ತಿತ್ವಕ್ಕೆ ಬಂದಲ್ಲಿ ಮುಖ್ಯಮಂತ್ರಿಗಳನ್ನು ದಸರಾ ಉತ್ಸವ ಉದ್ಘಾಟನೆಗೆ ಆಹ್ವಾನಿಸಲಾಗುವುದು ಎಂದು ಮೈಸೂರು ಜಿಲ್ಲಾಡಳಿತ ತಿಳಿಸಿದೆ.
ಈಗಾಲೇ ಉದ್ಘಾಟಕರಾಗಿ ಬರಬೇಕಿದ್ದ ಸಿದ್ಧಗಂಗೆಯ ಶ್ರೀ ಶಿವಕುಮಾರಸ್ವಾಮೀಜಿ ಅನಾರೋಗ್ಯದಿಂದ ಬರಲಾಗುತ್ತಿಲ್ಲ ಎಂದು ಹೇಳಿದ್ದಾರೆ.
ಅವರ ಬದಲು ಆದಿಚುಂಚನಗಿರಿ ಶ್ರೀಬಾಲಗಂಗಾಧರನಾಥ ಸ್ವಾಮಿಜಿ ಅವರು ಉದ್ಘಾಟಿಸಲಿದ್ದಾರೆ ಎಂದು ಹೇಳಲಾಗಿದೆ. ಇನ್ನೂ ಆಹ್ವಾನ ಪತ್ರಿಕೆ ಕೂಡಾ ಸಿದ್ಧವಾಗಿಲ್ಲ.
|