ಬಿಜೆಪಿಗೆ ಅಧಿಕಾರ ಹಸ್ತಾಂತರ ವಿಷಯದಲ್ಲಿ ವಚನ ಭ್ರಷ್ಟವಾದಾಗಿನಿಂದ ಜೆಡಿಎಸ್ ಅನ್ನು ತೊರೆಯುವ ಮುಖಂಡರ ಸಂಖ್ಯೆ ಹೆಚ್ಚಾಗಿದೆ.
ಜೆಡಿಎಸ್‌ನಲ್ಲಿ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ್ದ ಉದ್ಯಮಿ ವಿಜಯಸಂಕೇಶ್ವರ್ ಪಕ್ಷ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿಗೆ ಸೇರ್ಪಡೆಯಾಗುವ ಎಲ್ಲಾ ಲಕ್ಷಣಗಳೂ ಕಾಣುತ್ತಿವೆ.
ಈ ನಿಟ್ಟಿನಲ್ಲಿ ಬಿಜೆಪಿ ಮುಖಂಡ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರೂ ವಿಜಯಸಂಕೇಶ್ವರ್ ಆ ಪಕ್ಷವನ್ನು ಸೇರುವುದನ್ನು ಅಲ್ಲಗಳೆದಿದ್ದಾರೆ.
ಜೆಡಿಎಸ್ ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್ ಗುಡ್ ಬೈ ಹೇಳಿದ್ದಾರೆ. ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಡದ ಹಲವಾರು ಘಟನೆಗಳಿಂದ ತಮಗೆ ತೀವ್ರ ಮುಜುಗರವಾಗಿದ್ದು, ಜನರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದೆ ತಲೆ ತಗ್ಗಿಸುವಂಥ ಪರಿಸ್ಥಿತಿ ಎದುರಾಗಿದೆ ಎಂದ ಅವರು ಆ ಪಕ್ಷ ತ್ಯಜಿಸಲು ನಿರ್ಧರಿಸಿದ್ದಾಗಿ ಹೇಳಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತರಾಗಿ ಸಮಾಜವಾದಿ ಪಕ್ಷವನ್ನು ಸೇರಿದ್ದ ಮಾಜಿ ಶಾಸಕ ಯು.ಬಿ.ಬಣಕಾರ ಅವರುಈಗ ಪುನಃ ಬಿಜೆಪಿಗೆ ಮರಳಿದ್ದಾರೆ.
|