ಕೆಪಿಸಿಸಿಯನ್ನು ಪುನಃ ರಚಿಸಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದ್ದು, ಇನ್ನೊಂದು ವಾರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ವ್ಯಾಪಕ ಬದಲಾವಣೆ ಕಂಡುಬರಲಿದೆ. ಪ್ರಸ್ತುತ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಾಗೂ ಪ್ರತಿ ಪಕ್ಷ ನಾಯಕ ಸ್ಥಾನದಲ್ಲಿರುವ ಧರ್ಮಸಿಂಗ್ ಅವರ ಸ್ಥಾನಕ್ಕೆ ಯುವಕರನ್ನು ನೇಮಿಸಿಕೊಳ್ಳಬೇಕು ಎಂಬ ಬೇಡಿಕೆ ಎಲ್ಲೆಡೆ ಕೇಳಿ ಬರುತ್ತಿದೆ.
ಈ ಸ್ಥಾನಕ್ಕೆ ಮಾಜಿ ಉಪಮುಖ್ಯಮಂತ್ರಿ ಸಿದ್ಧರಾಮಯ್ಯ , ಮಾಜಿ ಸಚಿವ ಜಿ.ಪರಮೇಶ್ವರ್ ಸೇರಿದಂತೆ ಹಿರಿಯ ಕಾಂಗ್ರೆಸ್ ಮುಖಂಡರಿಗೆ ಪಕ್ಷದಲ್ಲಿ ಪ್ರಮುಖ ಸ್ಥಾನಗಳು ಸಿಗಲಿವೆ ಎಂದು ನೀರೀಕ್ಷಿಸಲಾಗಿದೆ.
ಕಳೆದ ತಿಂಗಳು ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಭಾರೀ ಹಿನ್ನಡೆ ಕಂಡಿತ್ತು. ಯುವಕರ ಕೈಗೆ ಸಂಘಟನೆಯ ಸೂತ್ರವನ್ನು ನೀಡಿದಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಗಟ್ಟಿಗೊಳ್ಳಲು ಸಾಧ್ಯವಿದೆ ಎಂದು ನಂಬಲಾಗಿದೆ . ಈ ಹಿನ್ನೆಲೆಯಲ್ಲಿ ಭಾರೀ ಸರ್ಜರಿ ನಡೆಸಲು ಕಾಂಗ್ರೆಸ್ ಪಕ್ಷದ ಪ್ರಮುಖರು ನಿರ್ಧರಿಸಿದ್ದಾರೆ.
|