ಮೈಸೂರು ದಸರಾದಲ್ಲಿ ಪಾಲ್ಗೊಳ್ಳುತ್ತಿರುವ ಪ್ರತಿಯೊಬ್ಬ ಜನಪದ ಕಲಾವಿದರಿಗೆ ನೀಡಲಾಗುತ್ತಿರುವ ಸಂಭಾವನೆಯನ್ನು 300.ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ,ವಾರ್ತಾ ಹಾಗು ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಐ.ಎಂ.ವಿಠಲಮೂರ್ತಿ ತಿಳಿಸಿದ್ದಾರೆ.
ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಜಾನಪದ ಕಲಾವಿದರಿಗೆ ಕಡಿಮೆ ಸಂಭಾವನೆ ನೀಡಲಾಗುತ್ತಿದೆ ಎಂದು ಕೇಳಿಬಂದ ದೂರುಗಳಿಗೆ ಸ್ಪಂದಿಸಿರುವ ಕಾರ್ಯದರ್ಶಿ ಈ ಕ್ರಮ ಕೈಗೂಂಡಿದ್ದಾರೆ.
ದಸರಾದಲ್ಲಿ ಪಾಲ್ಗೊಳ್ಳುತ್ತಿರುವ ಪ್ರತಿಯೊಬ್ಬ ಜನಪದ ಕಲಾವಿದರಿಗೆ ಕಡಿಮೆ ಸಂಭಾವನೆ ನೀಡಲಾಗುತ್ತಿದೆ ಎಂದು ಆರೋಪಿಸಿ ಕಲಾವಿದರು ಗುರುವಾರ ಪ್ರತಿಭಟನೆ ನಡೆಸಿದ್ದರು. ಇದರಿಂದ ಎಚ್ಚೆತ್ತಿರುವ ಸರ್ಕಾರ ಈ ಕ್ರಮ ಕೈಗೊಂಡಿದೆ.
|