ರಾಜ್ಯ ರಾಜಕೀಯದ ಗೊಂದಲಕಾರೀ ಪರಿಸ್ಥಿತಿಯ ನಡುವೆ ಕಾಂಗ್ರೆಸ್ ಪಕ್ಷ ನವೆಂಬರ್ 5 ರಂದು ಬೃಹತ್ ಸಮಾವೇಶ ನಡೆಸಲು ಸಿದ್ಧತೆ ನಡೆಸಿದೆ. ಪೌರ ಸಂಸ್ಥೆಗಳಲ್ಲಿ ಆಯ್ಕೆಯಾದ ಜನಪ್ರತಿನಿಧಿಗಳನ್ನು ಗೌರವಿಸುವ ಸಂಬಂಧ ನಡೆಯಲಿರುವ ಈ ಸಭೆಯ ಪೂರ್ವ ಸಿದ್ಧತೆಯ ಬಗ್ಗೆ ಇಂದು ಸಭೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯಲಿರುವ ಈ ಪಕ್ಷದ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ರಾಜ್ಯದಲ್ಲಿ ಪಕ್ಷದ ಜವಾಬ್ದಾರಿಯನ್ನು ಹೊತ್ತಿರುವ ಫೃಥ್ವಿರಾಜ್ ಚೌಹಾಣ್ ಸಮಾರಂಭಕ್ಕೆ ಆಗಮಿಸಲಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪತನಗೊಂಡ ಹಿನ್ನೆಲೆಯಲ್ಲಿ ಈ ಸಮಾವೇಶಕ್ಕೆ ಹೆಚ್ಚಿನ ಮಹತ್ವ ಬಂದಿದೆ. ಈಗಾಗಲೇ ಅಧಿಕಾರ ವಂಚಿತ ಬಿಜೆಪಿ ರಾಜ್ಯದೆಲ್ಲೆಡೆ ಧರ್ಮಯಾತ್ರೆ ಆರಂಭಿಸಿದ್ದರೆ, ಜೆಡಿಎಸ್ ವಿಶಾಲ ಪಾದಯಾತ್ರೆ ಆಯೋಜಿಸಿದೆ.
ಈ ನಡುವೆ ಕಾಂಗ್ರೆಸ್ ತಮ್ಮ ಶಕ್ತಿ ಪ್ರದರ್ಶನಕ್ಕಾಗಿ ರಾಜ್ಯಾದ್ಯಂತ ಯಾವರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ ಎಂಬುದು ಕುತೂಹಲದ ಪ್ರಶ್ನೆಯಾಗಿ ಉಳಿದಿದೆ.
|