ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಸಡ್ಡು ಹೊಡೆದು ಹೊಸ ಸರ್ಕಾರ ರಚನೆಗೆ ಸಜ್ಜಾಗುತ್ತಿರುವ ಜೆಡಿಎಸ್ ಹಿರಿಯ ಮುಖಂಡ ಎಂ.ಪಿ.ಪ್ರಕಾಶ್ ಶುಕ್ರವಾರ ಸಂಜೆ ದೆಹಲಿಗೆ ಹೊರಡಲಿದ್ದಾರೆ.
ತಮ್ಮ ಬೆಂಬಲಿಗ ಶಾಸಕರೊಂದಿಗೆ ಕಾಂಗ್ರೆಸ್ ಜತೆ ಸೇರಿ ಸರ್ಕಾರ ರಚನೆಗೆ ಕಾಂಗ್ರೆಸ್ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಎಂ.ಪಿ.ಪ್ರಕಾಶ್ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೂ ಸಹಾ ತಮ್ಮ ಪ್ರಯತ್ನಗಳಿಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ. ಜೆಡಿಎಸ್ ವರಿಷ್ಠರನ್ನು ಕತ್ತಲಿನಲ್ಲಿಟ್ಟು ತಾವೂ ಏನೂ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದೇವೇಗೌಡರಿಗೆ ಎಲ್ಲ ಮಾಹಿತಿಯನ್ನು ತಿಳಿಸಲಾಗುವುದು ಎಂದು ಅವರು ಹೇಳಿದ್ದಾರೆ. ಈ ನಡುವೆ ಶುಕ್ರವಾರ ಎಂ.ಪಿ.ಪ್ರಕಾಶ್ ಅವರ ಮನೆಗೆ ರಾಜಕೀಯ ಪಕ್ಷಗಳ ಮುಖಂಡರನೇಕರು ಭೇಟಿ ನೀಡಿದ್ದಾರೆ.
ಯಾವ ಪಕ್ಷಕ್ಕೂ ಸೇರದ ಸಮಾನ ಮನಸ್ಕ ಶಾಸಕರು ವಾಟಾಳ್ ಪಕ್ಷದ ಶಾಸಕ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ಸೇರಿ ಉದ್ದೇಶಿತ ಹೊಸ ಸರ್ಕಾರಕ್ಕೆ ಬೆಂಬಲ ಸೂಚಿಸಲು ನಿರ್ಧರಿಸಿದ್ದಾರೆ.
ಇಂದು ಪ್ರಕಾಶ್ ಅವರಿಗೆ ಈ ವಿಷಯವನ್ನು ತಿಳಿಸಿರುವುದಾಗಿ ವಾಟಾಳ್ ಹೇಳಿದ್ದಾರೆ.
|