ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಮಲ್ಲೇಶ್ವರಂನ ತಮ್ಮ ಪಕ್ಷದ ಕಛೇರಿಯಲ್ಲಿ ಈ ಸಭೆ ನಡೆಯಲಿದೆ. ಹೊಸ ಸರ್ಕಾರ ರಚನೆ ಸಂಬಂಧ ನಡೆಯಲಿರುವ ಪ್ರಕ್ರಿಯೆಯ ಬಗ್ಗೆ ಅಲ್ಲಿ ಚರ್ಚೆ ನಡೆಯಲಿದೆ.
ವಿದೇಶ ಪ್ರವಾಸದಲ್ಲಿರುವ, ರಾಜ್ಯ ಉಸ್ತುವಾರಿ ವಹಿಸಿರುವ ಬಿಜೆಪಿ ನಾಯಕ ಯಶವಂತ ಸಿನ್ಹಾ ಇಂದು ಮಧ್ಯಾಹ್ನ ನಗರಕ್ಕೆ ಆಗಮಿಸಿ ಚರ್ಚೆ ನಡೆಸಲಿದ್ದಾರೆ. ಈ ನಡುವೆ ಯಡಿಯೂರಪ್ಪ ಇಂದು ಮುಂಜಾನೆ ಜೆಡಿಎಸ್ ನಾಯಕ ಎಂಪಿ ಪ್ರಕಾಶ್ ಅವರನ್ನು ಭೇಟಿ ಯಾಗಿ ಮಾತುಕತೆ ನಡೆಸಿದರು. ನೂತನ ಸರ್ಕಾರಕ್ಕೆ ಅವರ ಬೆಂಬಲವನ್ನು ಯಾಚಿಸಿದ್ದರು ಎನ್ನಲಾಗಿದೆ.
ಈ ನಡುವೆ ಬಿಜೆಪಿ ಪಾಳಯದಲ್ಲಿ ಹಬ್ಬದ ವಾತಾವರಣ ಕಂಡುಬರುತ್ತಿದೆ. ನಗರದ ಯಡಿಯೂರಪ್ಪ ನಿವಾಸದಲ್ಲಿ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿದ್ದಾರೆ.
|