ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಹಿರಿಯ ರಂಗ ಕರ್ಮಿ ಪ್ರೇಮಾ ಕಾರಂತ (70) ನಗರದ ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ ನಿಧನರಾದರು.
ಹೃದಯ ಸಂಬಂಧಿಸಿದ ಕಾಯಿಲೆಯಿಂದ ಅವರು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಪ್ರೇಮಾ ಕಾರಂತ ನಿಧನಕ್ಕೆ ನಾಡಿನ ಗಣ್ಯರು, ರಂಗಕರ್ಮಿಗಳು ಹಾಗೂ ರಂಗಪ್ರೇಮಿಗಳು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಇಂದು ಸಂಜೆ ನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರೇಮಾ ಕಾರಂತರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತದೆ.
ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಶ್ರೀನಿವಾಸ ಕಪ್ಪಣ್ಣ, ರಂಗ ಕರ್ಮಿ ಪ್ರಸನ್ನ ಮತ್ತಿತರ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
|