ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದಲೇ ಜೆಡಿಎಸ್ ಬೆಂಬಲದೊಂದಿಗೆ ಬಿಜೆಪಿ ಹೊಸ ಸರಕಾರ ರಚನೆ ಮಾಡಲು ಅನುಮತಿ ನೀಡಿದ್ದಾಗಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕಾಂಗ್ರೆಸ್‌ನ ಒಂದು ಗುಂಪು ತಮ್ಮ ಪಕ್ಷವನ್ನು ಒಡೆಯಲು ಸಜ್ಜಾಗಿದ್ದರಿಂದ ಪಕ್ಷವನ್ನು ಉಳಿಸಿಕೊಳ್ಳುವ ದೃಷ್ಟಿಯಿಂದ ತಾವು ಈ ನಿರ್ಧಾರಕ್ಕೆ ಬರಬೇಕಾಯಿತು ಎಂದು ಹೇಳಿದ್ದಾರೆ.
ತಮ್ಮ ಪಕ್ಷವನ್ನು ಒಡೆಯಲು ನಡೆದ ಪ್ರಯತ್ನಗಳ ಬಗ್ಗೆ ಕೆಲ ಉದಾಹರಣೆಗಳನ್ನು ನೀಡಿದ ಅವರು ರಾಜಕೀಯ ಸ್ಥಿತ್ಯಂತರವಾಗುವ ಸಮಯದಲ್ಲಿ ಮಹಾರಾಷ್ಟ್ರ ರಾಜ್ಯಪಾಲರಿಗೆ ಬೆಂಗಳೂರಿನಲ್ಲಿ ಏನು ಕೆಲಸ ಇತ್ತು ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಯೊಂದಿಗೆ ತಮ್ಮ ಪಕ್ಷ ಜತೆಗೂಡಿ ಸರಕಾರ ರಚನೆ ಮಾಡಿದರೂ ಇನ್ನು ಮುಂದೆ ರಾಜ್ಯದಲ್ಲಿ ನಡೆಯುವ ಯಾವುದೇ ಚುನಾವಣೆಯಲ್ಲಿ ತಮ್ಮ ಪಕ್ಷ ಕಾಂಗ್ರೆಸ್ ಹಾಗೂ ಬಿಜೆಪಿಗೆ ಸಮಾನ ದೂರ ಕಾಯ್ದುಕೊಳ್ಳುವುದಾಗಿ ಸ್ಪಷ್ಟ ಪಡಿಸಿದರು.
1996 ಪರಿಸ್ಥಿತಿ ಮರುಕಳಿಸಿದ್ದರಿಂದಲೇ ತಮ್ಮ ಪಕ್ಷದ ಶಾಸಕಾಂಗ ಸಭೆ ಬಿಜೆಪಿಯೊಂದಿಗೆ ಮರುಮೈತ್ರಿ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಉಂಟಾಯಿತು ಎಂದು ಅವರು ವಿವರಿಸಿದ್ದಾರೆ.
|