ಇತ್ತ ಸರ್ಕಾರ ರಚನೆಗೆ ತಮ್ಮನ್ನು ಆಹ್ವಾನಿಸಬೇಕು ಎಂದು ರಾಜ್ಯಪಾಲರಮೇಲೆ ಒತ್ತಡ ತರುವ ತಂತ್ರಗಳನ್ನು ಬಿಜೆಪಿ ಹಾಗು ಜೆಡಿಎಸ್ ಮುಂದುವರೆಸಿದ್ದರೆ ಬಿಜೆಪಿಗೆ ಅಧಿಕಾರ ದೊರೆಯಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ತನ್ನ ಚಟುವಟಿಕೆಗಳನ್ನು ತೀವ್ರಗೊಳಿಸಿದೆ.
ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ವಹಿಸಿಕೊಂಡಿರುವ ಪೃಥ್ವೀರಾಜ್ ಚೌಹಾನ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ವಿಧಾನಸಭೆಯನ್ನು ವಿಸರ್ಜಿಸಬೇಕು ಎಂದು ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸುತ್ತಿರುವ ಪೃಥ್ವೀರಾಜ್ ಚೌಹಾನ್ ಅವರು ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆ ಇದೆ.
ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದ ಜೆಡಿಎಸ್ ಹಾಗೂ ಬಿಜೆಪಿ ಮತ್ತೆ ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇ ಆದರೆ ಸ್ಥಿರ ಸರ್ಕಾರ ಸ್ಥಾಪನೆ ಸಾಧ್ಯವಾಗುವುದಿಲ್ಲ, ಹಾಗಾಗಿ ಆ ಪಕ್ಷಗಳಿಗೆ ಸರ್ಕಾರ ರಚನೆಗೆ ಅವಕಾಶ ನೀಡಬಾರದು ಎಂಬುದು ಕಾಂಗ್ರೆಸ್ ವಾದ.
|