ವಿಶ್ವಕನ್ನಡ ಸಮ್ಮೇಳನವು ನಿಗದಿಯಾದಂತೆಯೇ ಬೆಳಗಾವಿಯಲ್ಲಿ ನಡೆಯಲಿದೆ ಎಂದು ಹೇಳಿರುವ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರು, ರಾಷ್ಟ್ರಪತಿ ಆಳ್ವಿಕೆ ಹಿನ್ನೆಲೆಯಲ್ಲಿ ಸಮಾವೇಶ ರದ್ದಾಗಲಿದೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ವಿಧಾನಸೌಧದಲ್ಲಿ ಚಹಾ ಗೋಷ್ಠಿ ಆತಿಥ್ಯ ಸಂದರ್ಭ ಸುದ್ದಿಗಾರರೊಂದಿಗೆ ಅನೌಪಚಾರಿಕವಾಗಿ ಮಾತನಾಡುತ್ತಿದ್ದ ಅವರು, ಸಮಾವೇಶ ನಡೆಸುವ ಹಿಂದಿನ ಸರಕಾರದ ನಿರ್ಧಾರದ ಅರಿವು ತನಗಿರಲಿಲ್ಲ ಎಂದು ಹೇಳಿದರು.
ಹಿಂದಿನ ಸರಕಾರದ ಯಾವುದೇ ಶ್ಲಾಘನಾರ್ಹ ನಿರ್ಧಾರಗಳನ್ನು ಸಮರ್ಪಕವಾಗಿ ಕಾರ್ಯರೂಪಕ್ಕೆ ತರಲಾಗುತ್ತದೆ ಎಂದು ಅವರು ಭರವಸೆ ನೀಡಿದರು.
ಕರ್ನಾಟಕ ರಾಜ್ಯೋತ್ಸವ ಸಂದರ್ಭ ಠಾಕೂರ್ ಅವರು ನಾಡಿನ 51 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು.
|