ಜೆಡಿಎಸ್ ಹಾಗೂ ಬಿಜೆಪಿ ನಡುವೆ 20 ತಿಂಗಳ ಹಿಂದೆ ಆಗಿರುವ ಒಪ್ಪಂದದಂತೆ ಮತ್ತೆ ಮೈತ್ರಿ ಸರ್ಕಾರ ರಚನೆಯಾಗಬೇಕು ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದಗೌಡ ಅವರು ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೈತ್ರಿ ಪಕ್ಷಗಳ ನಡುವೆ ಯಾವುದೇ ಅನುಮಾನಕ್ಕೆ ಆಸ್ಪದ ಇರಬಾರದೆಂಬುದೇ ತಮ್ಮ ಅಭಿಪ್ರಾಯವಾಗಿದೆ ಎಂದು ಹೇಳಿದ್ದಾರೆ.
ಎರಡು ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ತಲೆದೋರಿದಾಗ ತಮ್ಮ ಪಕ್ಷ ರಾಜ್ಯದಲ್ಲಿ ಧರ್ಮಯಾತ್ರೆ ಕೈಗೊಂಡಾಗ ಜನರು ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿದ್ದನ್ನು ನೆನಪಿಸಿಕೊಂಡ ಅವರು, ಮುಂದೆ ಚುನಾವಣೆ ನಡೆದರೆ ಬಿಜೆಪಿಗೆ ಕನಿಷ್ಠ 140 ಸೀಟುಗಳು ಲಭಿಸಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
|