ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಡಿಕೆಶಿ ವಿರುದ್ದ ಪೊಲೀಸರಿಗೆ ದೂರು
ಅನಂತ್ ಕುಮಾರ್ ವಿರುದ್ದ ಹೇಳಿಕೆ:
ಭಾರತೀಯ ಜನತಾ ಪಕ್ಷದ ರಾಷ್ಟ್ತ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಅನಂತ್ ಕುಮಾರ್ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ವಿರುದ್ದ ಬಿಜೆಪಿ ನಗರ ಘಟಕದ ಕಾರ್ಯಕರ್ತರು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸೋಮವಾರ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಅನಂತ್ ಕುಮಾರ್ ಅವರ ಬಟ್ಟೆ ಹರಿದು ಬಿಡುವಂತೆ ಶಿವಕುಮಾರ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಬಿಜೆಪಿ ನಗರ ಘಟಕದ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿ ಶಿವಕುಮಾರ್ ವಿರುದ್ದ ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.

ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ವಡೇರಾ ಅವರು ನಕಲಿ ಗಾಂಧಿಗಳೆಂದು ಅನಂತ್ ಕುಮಾರ್ ಟೀಕಿಸಿದ್ದರು.

ಇದಕ್ಕೆ ಖಾರವಾಗಿ ಪ್ರತಿಕ್ರಯಿಸಿದ ಶಿವಕುಮಾರ್ , ಅನಂತ್ ಕುಮಾರ್ ಅವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿ ಕಾರ್ಯಕರ್ತರನ್ನು ಹಿಂಸಾಚಾರಕ್ಕೆ ಪ್ರಚೋದಿಸಿದ್ದಾರೆ ಎಂದು ಬಿಜೆಪಿ ನಗರ ಘಟಕ ಅಧ್ಯಕ್ಷ ವಿಜಯ್ ಕುಮಾರ್ ಆರೋಪಿಸಿದ್ದಾರೆ.
ಮತ್ತಷ್ಟು
ಎಲ್ಲೆಡೆ ದೀಪಾವಳಿ ಕಳೆ: ಹಬ್ಬದ ಉತ್ಸಾಹ
ಪುಟಾಣಿ ಲಕ್ಷ್ಮಿ ಶಸ್ತ್ರಚಿಕಿತ್ಸೆ ಯಶಸ್ವಿ
ಸ್ಥಿರ ಸರಕಾರ ಅಸಾಧ್ಯ:ರಾಜ್ಯಪಾಲರ ವರದಿ
ದೆಹಲಿಗೆ ಶಾಸಕರು: ಗೌಡರ ಅಸಮಾಧಾನ ?
ಸಾವಿರ ಕೋಟಿಗೂ ಅಧಿಕ ವಿದ್ಯುತ್ ಶುಲ್ಕ ಬಾಕಿ
ಮತ್ತೆ ನಕ್ಸಲರ ಕರಪತ್ರಗಳು