ಜೆಡಿ(ಎಸ್) ಪಕ್ಷದ 18 ಶಾಸಕರು ರಾಜ್ಯ ಸಚಿವರಾಗಿ ನವೆಂಬರ್ 21ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕರ್ನಾಟಕ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿ(ಎಸ್) ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಶಾಸಕಾಂಗ ಪಕ್ಷದ ಸಭೆಯ ನಂತರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಉಪಮುಖ್ಯಮಂತ್ರಿಯ ಆಯ್ಕೆಯ ಅಧಿಕಾರವನ್ನು ಪಕ್ಷದ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಹೊಂದಿದ್ದಾರೆ ಎಂದು ಹೇಳಿದರು.ಪ್ರಮಾಣವಚನ ಸ್ವೀಕಾರ ಸಮಾರಂಭವು ರಾಜಭವನದಲ್ಲಿ ನಡೆಯಲಿದೆ ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಯಡ್ಯೂರಪ್ಪ ಅವರಿಂದ ರಚನೆಗೊಂಡ ನೂತನ ಬಿಜೆಪಿ-ಜೆಡಿ(ಎಸ್) ಸರಕಾರದ ವಿಶ್ವಾಸಮತ ಯಾಚನೆ ಅಸೆಂಬ್ಲಿ ಅಧಿವೇಶನದಲ್ಲಿ ಪಕ್ಷದ ಶಾಸಕರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಪ್ರಧಾನ ನ್ಯಾಯವಾದಿಗಳ ಮರುನೇಮಕ ಮತ್ತು ಅಧಿಕಾರಿಗಳ ವರ್ಗಾವಣೆ ಕುರಿತಾಗಿ ಬುಧವಾರ ನಡೆದ ಸಚಿವಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದ ಬಗ್ಗೆ ಸಭೆಯು ಅಸಮಧಾನ ವ್ಯಕ್ತಪಡಿಸಿತು.
|