ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಇಂದು ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ
ಮರು ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದನಂತರ ಮೊದಲಬಾರಿಗೆ ಯಡಿಯೂರಪ್ಪ ಅವರು ದೆಹಲಿಗೆ ತೆರಳಲಿದ್ದಾರೆ.

ಗುರುವಾರ ಸಂಜೆ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಸಂಸದರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ದಿ ವಿಷಯದಲ್ಲಿ ಸಹಕರಿಸುವಂತೆ ಮನವಿ ಮಾಡಲಿದ್ದಾರೆ.

ಕೇಂದ್ರ ಗೃಹ ಸಚಿವ ಹಾಗೂ ಕೃಷಿ ಸಚಿವರನ್ನು ಭೇಟಿ ಮಾಡಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದಲ್ಲಿ ನೆರೆಗೆ ತುತ್ತಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯಕ್ರಮಗಳನ್ನು ಕೈಗೊಳ್ಳಲು ಅನುವಾಗುವಂತೆ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಲಿದ್ದಾರೆ.

ಲೋಕಸಭೆ ಹಾಗೂ ರಾಜ್ಯ ಸಭೆ ಅಧಿವೇಶನ ನಡೆಯುತ್ತಿರುವುದರಿಂದ ಇದು ತಮ್ಮ ಭೇಟಿಗೆ ಸೂಕ್ತ ಸಮಯ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಅವಕಾಶವಾದರೆ ತಾವು ಪ್ರಧಾನಿ ಮನಮೋಹನ್‌ಸಿಂಗ್ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದ ಅವರು ಇದು ಕೇವಲ ಸೌಜನ್ಯ ಭೇಟಿ ಎಂದು ಸ್ಪಷ್ಟಪಡಿಸಿದ್ದಾರೆ.
ಮತ್ತಷ್ಟು
ನ.21ರಂದು ಪ್ರಮಾಣವಚನ:ಕುಮಾರಸ್ವಾಮಿ
ಮಹಿಮಾ ಪಟೇಲರ ಸುವರ್ಣಯುಗ ಆರಂಭ
ಕುಮಾರನ ಮಾತಿಗೆ ಶತ-ಪಥ ತುಳಿದ ಯಡಿಯೂರಪ್ಪ
ಲಕ್ಷ್ಮಿ ಕುಟುಂಬಕ್ಕೆ 1 ಲಕ್ಷ ರೂ ಸಹಾಯ
ಸಂಪುಟ ವಿಸ್ತರಣೆ ಬಳಿಕ ನಿಗಮ ಮಂಡಳಿಗಳಿಗೆ ನೇಮಕ
ಜೆಡಿಎಸ್ ಮುಖಂಡರಿಗೆ ಸಚಿವ ಆಕಾಂಕ್ಷಿಗಳ ಕಿರಿಕಿರಿ