ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯದಲ್ಲಿ ಮೂಲಭೂತ ಸೌಕರ್ಯಗಳ ಕಲ್ಪನೆಗೆ ಹೆಚ್ಚು ನೆರವು ನೀಡುವಂತೆ ಅವರು ಪ್ರಧಾನಿಗೆ ಮನವಿ ಮಾಡಿದ್ದಾರೆ. ಪ್ರಕೃತಿ ವಿಕೋಪಗಳಿಗೆ ಸಿಲುಕಿದಾಗ ಆಗಿರುವ ನಷ್ಟವನ್ನು ಭರಿಸುವುದರೊಂದಿಗೆ ಪರಿಹಾರ ಕಾಮಗಾರಿಗೆ ನೆರವು ನೀಡುವಂತೆ ಕೋರಿದ್ದಾರೆ.
ನನೆಗುದಿಗೆ ಬಿದ್ದಿರುವ ರಾಜ್ಯದ ಹಲವಾರು ಯೋಜನೆಗಳಿಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದೊಂದು ಸೌಜನ್ಯಯುತ ಭೇಟಿ ಎಂದು ಹೇಳಿದ್ದಾರೆ.
|