ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡದೆ ಕೈಕೊಟ್ಟ ದೇವೇಗೌಡ - ಕುಮಾರಸ್ವಾಮಿ ಧೋರಣೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಇಂದು ಅವರಿಗೆ ಧಿಕ್ಕಾರ ಕೂಗಿ, ಪ್ರತಿಕೃತಿಗಳನ್ನು ದಹಿಸಿದ್ದಾರೆ.
ಪಕ್ಷದ ನೂರಾರು ಕಾರ್ಯಕರ್ತರು ಜಮಾವಣೆಗೊಂಡಿದ್ದ ಈ ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡರ ಧೋರಣೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಯಿತು ಎಂದು ತಿಳಿದುಬಂದಿದೆ.
ಸದ್ಯದಲ್ಲಿಯೇ ಮೈಸೂರು ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರುಗಳು ಇದೇ ಮಾರ್ಗವನ್ನು ಅನುಸರಿಸಲಿದ್ದಾರೆ ಎಂದು ತಿಳಿದುಬಂದಿದೆ.
|