ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಪಕ್ಷವುಳಿಸಲು ಪ್ರಕಾಶ್‌ಗೆ ಪಟ್ಟ: ದೇವೇಗೌಡ ಕಸರತ್ತು
ಈ ಬಾರಿ ಎಂ.ಪಿ.ಪ್ರಕಾಶ್ ಅವರನ್ನು ಮುಖ್ಯಮಂತ್ರಿ ಪಟ್ಟದಲ್ಲಿ ಕೂರಿಸಿ ಜೆಡಿಎಸ್ ಆಂತರಿಕ ಬಿಕ್ಕಟ್ಟು ಶಮನಗೊಳಿಸಬಹುದೆಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಂಡು ಮತ್ತೊಮ್ಮೆ ಸಮ್ಮಿಶ್ರ ಸರ್ಕಾರ ರಚನೆಗೆ ಜೆಡಿಎಸ್ ವರಿಷ್ಠ ದೇವೇಗೌಡರು ಕಸರತ್ತು ನಡೆಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ಈಗಾಗಲೇ ಕೇಂದ್ರ ಸಚಿವ ಶಿವರಾಜ ಪಾಟೀಲ್ ಜೊತೆ ಅವರು ದೂರವಾಣಿ ಮೂಲಕ ಮಾತನಾಡಿರುವುದಾಗಿ ಜೆಡಿಎಸ್ ಮೂಲಗಳು ತಿಳಿಸಿವೆ. ಹಿರಿಯ ರಾಜಕಾರಣಿ ಎಂ.ಪಿ.ಪ್ರಕಾಶ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿದರೆ ತಾವು ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ದೇವೇಗೌಡರು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

ಆದರೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಕೋಮುವಾದಿ ಪಕ್ಷ ಅಧಿಕಾರಕ್ಕೆ ಬರಬಾರದು ಎಂಬ ಉದ್ದೇಶದಿಂದ ಬಿಜೆಪಿಗೆ ಬೆಂಬಲ ನೀಡಿಲ್ಲ ಎಂದು ಸಮರ್ಥಿಸಿಕೊಂಡಿರುವ ಅವರು, ಜಾತ್ಯತೀತ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಒಂದುಗೂಡಬೇಕು ಎಂದು ಹೇಳಿಕೊಂಡಿರುವುದಾಗಿ ಮೂಲಗಳು ಹೇಳಿವೆ.

ಆದರೆ ಜೆಡಿಎಸ್‌ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ಕಾಂಗ್ರೆಸ್ ಒಲವು ತೋರಿಲ್ಲ. ಜೆಡಿಎಸ್‌ನೊಂದಿಗೆ ಜೊತೆಗೂಡಿ ಮೈತ್ರಿ ಸರ್ಕಾರ ರಚಿಸುವ ಸಮಯ ಮುಗಿದುಹೋಗಿದೆ ಎಂದು ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ವ್ಯಾಖ್ಯಾನಿಸಿದ್ದಾರೆ.
ಮತ್ತಷ್ಟು
ಬಿಜೆಪಿಗೆ ಮರಳಲು ಉಮಾಗೆ ಪೇಜಾವರಶ್ರೀ ಸಲಹೆ
ಬೊಕ್ಕಸ ಲೂಟಿ ಮಾಡಿ ಚುನಾವಣೆ ಹೇರಿದ 'ಮಿತ್ರರು' : ಕಾಂಗ್ರೆಸ್
ರಾಜ್ಯ(ಜ)ಕಾರಣ: ಕಾಂಗ್ರೆಸ್ ಬಾಗಿಲು ತಟ್ಟುವ ದಳ ಗುಂಪು
ದೇವೇಗೌಡ - ಕುಮಾರಸ್ವಾಮಿ ಪ್ರತಿಕೃತಿ ದಹನ
ಕುಮಾರಣ್ಣನದು ಪ್ರಾದೇಶಿಕ ಪಕ್ಷವಲ್ಲ : ವೈ.ಎಸ್.ವಿ. ದತ್ತ
ಮೈತ್ರಿ ಇಲ್ಲ; ಕಾಂಗ್ರೆಸ್ ಚುನಾವಣೆಗೆ ಸಿದ್ಧ