ಆಂತರಿಕ ಪ್ರಜಾಪ್ರಭುತ್ವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ಇಲ್ಲದ ಪಕ್ಷದಲ್ಲಿ ಮುಂದುವರಿಯಲು ಬಯಸುವುದಿಲ್ಲ ಎಂದು ಹಿರಿಯ ನಾಯಕ ಎಂ.ಪಿ.ಪ್ರಕಾಶ್ ಹೇಳಿದ್ದಾರೆ.
ಜೆಡಿಎಸ್‌ನಲ್ಲಿ ಇಂದು ಆಂತರಿಕ ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲದಂತಾಗಿ ಏಕವ್ಯಕ್ತಿಯ ನಿರ್ಣಯವೇ ಅಂತಿಮವಾಗುತ್ತಿದೆ ಎಂದು ಪರೋಕ್ಷವಾಗಿ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದರು.
ಸಮ್ಮಿಶ್ರ ಸರಕಾರದ ವಿಷಯ ಸೇರಿದಂತೆ ವಿವಿಧ ವಿಚಾರಗಳ ಕುರಿತು ಮಹತ್ವದ ನಿರ್ಣಯಗಳನ್ನು ತಮ್ಮ ಗಮನಕ್ಕೂ ತಾರದೆ ತೆಗೆದುಕೊಳ್ಳಲಾಗಿದೆ.ದೇವೇಗೌಡರು ಕೈಗೊಂಡಿರುವ ಕೆಲ ನಿರ್ಧಾರಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು, ಗೌಡರು ಜೆಡಿಎಸ್ ಅನ್ನು ಅಪ್ಪ-ಮಕ್ಕಳ ಪಕ್ಷವನ್ನಾಗಿಸಿದ್ದಾರೆ ಎಂದು ಕಿಡಿಕಾರಿದರು.
ರಾಜಕೀಯ ಸ್ಥಿತಿ ಹಾಗೂ ಮುಂದಿನ ಹೆಜ್ಜೆ ಕುರಿತು ಚರ್ಚೆ ನಡೆಸಲು ನಾಳೆ(ನ.28) ಮುಖಂಡರ ಹಾಗೂ ಸಮಾನಮನಸ್ಕರ ಸಭೆ ಕರೆಯಲಾಗಿದ್ದು, ಅಲ್ಲಿ ಮುಂದಿನ ರಾಜಕೀಯ ನಿಲುವಿನ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಜೆಡಿಎಸ್‌ನ ಮುಖಂಡರು, ಶಾಸಕರು , ಮಾಜಿ ಶಾಸಕರು ಕಳೆದ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧಿಸಿ ಸೋಲನುಭವಿಸಿದ ಅಭ್ಯರ್ಥಿಗಳು, ಎಲ್ಲ ಜಿಲ್ಲೆಗಳ ಮುಖಂಡರನ್ನು ಈ ಸಭೆಗೆ ಆಹ್ವಾನಿಸಲಾಗಿದೆ. ಸುಮಾರು 25ಮಂದಿ ಶಾಸಕರು ಪಾಲ್ಗೂಳ್ಳುವ ನಿರೀಕ್ಷೆ ಇದೆ ಎಂದರು.
ರಾಜಕೀಯ ನಿರ್ಧಾರದ ಜತೆಗೆ ಹುಬ್ಬಳ್ಳಿ ಇಲ್ಲವೇ ದಾವಣಗೆರೆಯಲ್ಲಿ ರಾಜಕೀಯ ಮಹಾಧಿವೇಶನ ನಡೆಸಲೂ ಸಭೆಯಲ್ಲಿ ತೀರ್ಮಾನಿಸಲಾಗುವುದು. ಡಿಸೆಂಬರ್ ಅಂತ್ಯದೊಳಗೆ ಈ ಅಧಿವೇಶನ ನಡೆಯಲಿದೆ ಎಂದು ಹೇಳಿದರು.
|