ತುಮಕೂರಿನ ಸಿದ್ಧಗಂಗಾ ಮಠದ ಡಾ|| ಶ್ರೀ ಶಿವಕುಮಾರ ಸ್ವಾಮೀಜಿಯವರು ಸೇರಿದಂತೆ ರಾಜ್ಯದ ವಿವಿಧ ಮಠಾಧೀಶರುಗಳ ಕುರಿತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನೀಡಿರುವರೆನ್ನಲಾದ ಹೇಳಿಕೆಯನ್ನು ಖಂಡಿಸಿ ಇಂದು ತುಮಕೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಸಿದ್ಧಗಂಗಾ ಮಠದ ವಿದ್ಯಾರ್ಥಿಗಳು ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ಮೆರವಣಿಗೆಯನ್ನು ನಡೆಸಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ವಿರುದ್ಧ ಘೋಷಣೆಗಳನ್ನು ಕೂಗಿದರು ಎಂದು ತಿಳಿದುಬಂದಿದೆ.
ಕರ್ನಾಟಕದಲ್ಲಿ ಈ ಅಪ್ಪ-ಮಕ್ಕಳನ್ನು ಕೇಳುವವರೇ ಇಲ್ಲದಂತಾಗಿದೆ. ತಮಗಿಷ್ಟ ಬಂದಂತೆ ನಿರ್ಧಾರಗಳನ್ನು ಕೈಗೊಳ್ಳುವುದೂ ಸಾಲದೆಂಬಂತೆ ಮಠಾಧಿಪತಿಗಳ ಬಗ್ಗೆಯೂ ಕುಮಾರಸ್ವಾಮಿ ಲಘುವಾಗಿ ಮಾತನಾಡಿದ್ದಾರೆ. ತಪ್ಪನ್ನು ಒಪ್ಪಿಕೊಂಡು ಕುಮಾರಸ್ವಾಮಿಯವರು ಶ್ರೀಗಳ ಕ್ಷಮೆ ಯಾಚಿಸದಿದ್ದರೆ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
|