ಹಿಂದಿ ಸಾಹಿತ್ಯ ಅಕಾಡೆಮಿ ಸ್ಥಾಪನೆಗೆ ರಾಜ್ಯಪಾಲರ ಒಲವು
|
|
|
ಬೆಂಗಳೂರು, ಸೋಮವಾರ, 10 ಡಿಸೆಂಬರ್ 2007( 16:50 IST )
|
|
|
|
|
|
|
|
ರಾಜ್ಯದಲ್ಲಿ ಹಿಂದಿ ಅಕಾಡೆಮಿ ಸ್ಥಾಪನೆಗೆ ಪ್ರಸ್ತಾವಗಳು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ರಾಜ್ಯಪಾಲ ರಾಮೇಶ್ವರ ಠಾಕೂರ್ ತಿಳಿಸಿದ್ದಾರೆ.
ಕರ್ನಾಟಕ ಮಹಿಳಾ ಹಿಂದಿ ಸೇವಾ ಸಮಿತಿಯ 34ನೇ ಹಿಂದಿ ಘಟಿಕೋತ್ಸವದಲ್ಲಿ ಮಾತನಾಡುತ್ತಿದ್ದ ಅವರು, ರಾಜ್ಯದಲ್ಲಿ ಹಿಂದಿ ಭಾಷೆ ಬೆಳೆಯಬೇಕಿದ್ದರೆ ಕನ್ನಡ ಹಾಗೂ ಹಿಂದಿ ಭಾಷೆಯ ನಡುವೆ ಸಂಪರ್ಕಸೇತುವಾಗಿ ಕಾರ್ಯನಿರ್ವಹಿಸುವ ಅಧಿಕಾರಿಯನ್ನು ನೇಮಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಹಿಂದಿ ಭಾಷೆಯ ಪ್ರಚಾರಕ್ಕಾಗಿ ಸರೋಜಿನಿ ಮಹಿಷಿಯವರು ಕೈಗೊಂಡಿರುವ ಕಾರ್ಯಗಳನ್ನು ಪ್ರಶಂಸಿಸಿದ ರಾಜ್ಯಪಾಲರು, ಕನ್ನಡ ಭಾಷೆಗೆ ಮಾನ್ಯತೆ ನೀಡುವುದರ ಜೊತೆಜೊತೆಗೆ ಹಿಂದಿ ಭಾಷೆಯ ಪ್ರಚಾರವನ್ನೂ ಕೈಗೊಂಡರೆ ಎರಡೂ ಭಾಷೆಗಳ ಸಮನ್ವಯ ಸಾಧಿಸಿದಂತಾಗುತ್ತದೆ ಎಂದು ತಿಳಿಸಿದರು.
ಸಮಿತಿಯ ಅಧ್ಯಕ್ಷೆ ಡಾ| ರಾಧಾ ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ.ಎಸ್.ಶಾಂತಾದೇವಿಯವರು ಸಭೆಯಲ್ಲಿ ಉಪಸ್ಥಿತರಿದ್ದರು.
|
|
|
|