ಯಾವುದೇ ಕಾರಣಕ್ಕೂ ಜೆಡಿಎಸ್‌ನಲ್ಲಿ ತಾವು ಉಳಿಯುವ ಸಾಧ್ಯತೆಗಳಿಲ್ಲ ಎಂದು ಎಂ.ಪಿ.ಪ್ರಕಾಶ್ ತಿಳಿಸಿದ್ದಾರೆ.ಅವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳುವ ಕುರಿತು ನಡೆಯುತ್ತಿರುವ ತೀವ್ರ ಪ್ರಯತ್ನಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ಈಗಾಗಲೇ ಸಾಕಷ್ಟು ದೂರ ಬಂದಿರುವ ತಾವು ಹಿಂದಕ್ಕೆ ಹೆಜ್ಜೆಯಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಾಜಿ ಸಚಿವ ಚೆಲುವರಾಯಸ್ವಾಮಿ ಮತ್ತವರ ಸ್ನೇಹಿತರು ಜೆಡಿಎಸ್‌ನಲ್ಲಿಯೇ ಉಳಿಯುವ ನಿರ್ಧಾರ ಕೈಗೊಂಡಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ ಎಂದು ಪ್ರಕಾಶ್ ತಿಳಿಸಿದ್ದಾರೆ.
ತಮ್ಮೊಂದಿಗೆ ಗುರುತಿಸಿಕೊಂಡಿರುವ ಸಮಾನ ಮನಸ್ಕರ ಸಭೆ ನಾಳೆ ನಡೆಯಲಿದ್ದು, ಅದಾದ ನಂತರ ತಮ್ಮ ಮುಂದಿನ ನಡೆಯ ಕುರಿತು ಪ್ರಕಟ ಪಡಿಸುವುದಾಗಿ ಪ್ರಕಾಶ್ ತಿಳಿಸಿದ್ದಾರೆ.
|