ಭಾರತೀಯ ಜನತಾ ಪಕ್ಷಕ್ಕೆ ವ್ಯಕ್ತಿಗಿಂತ ಪಕ್ಷದ ಸಿದ್ದಾಂತಗಳಿಗೆ ಪ್ರಾಮುಖ್ಯತೆ ನೀಡಲಾಗುತ್ತದೆ. ಪಕ್ಷಕ್ಕಿಂತ ಯಾವುದೇ ವ್ಯಕ್ತಿ ದೊಡ್ಡವರಲ್ಲ. ಭಿನ್ನಾಭಿಪ್ರಾಯಗಳಿದ್ದರೂ ಅವುಗಳನ್ನು ಪಕ್ಷದ ಸೂಕ್ತ ವೇದಿಕೆಯಲ್ಲಿ ಮಂಡಿಸಬೇಕು ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಯಶವಂತ್ ಸಿನ್ಹಾ ಹೇಳಿದರು.
ಇಲ್ಲಿ ನಡೆಯುತ್ತಿರುವ ಪಕ್ಷದ ಕಾರ್ಯಕಾರಿಣಿಗೆ ಚಾಲನೆ ನೀಡಿ ಮಾತನಾಡುತ್ತಿದ್ದ ಅವರು, ಪಕ್ಷಕ್ಕೆ ಹಾನಿಯಾಗುವಂತಹ ನಡವಳಿಕೆ ಮುಖಂಡರಲ್ಲಿದ್ದರೆ ಆ ಕುರಿತು ಅವರು ಜಾಗೃತರಾಗಬೇಕು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂದು ಅಭಿಪ್ರಾಯಪಟ್ಟರು.
ಸಭೆಯ ನಂತರ ರಾಜ್ಯ ಬಿಜೆಪಿ ವಕ್ತಾರ ಎಸ್.ಸುರೇಶ್ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಹಿಂದಿನ ಸರ್ಕಾರದಲ್ಲಿನ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಕ್ರಮ ಕೈಗೊಳ್ಳಲು ರಾಜ್ಯಪಾಲರನ್ನು ಒತ್ತಾಯಿಸುವ ಹಾಗೂ ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡುವಂತೆ ರಾಜ್ಯದ ಜನತೆಗೆ ಮನವಿ ಮಾಡಿಕೊಳ್ಳುವ ನಿರ್ಣಯಗಳನ್ನು ಸಭೆಯಲ್ಲಿ ಕೈಗೊಳ್ಳಲಾಯಿತು ಎಂದು ತಿಳಿಸಿದ್ದಾರೆ.
ಭದ್ರಾ ಅಚ್ಚುಕಟ್ಟು ಯೋಜನೆಗೆ ಅಗತ್ಯವಿರುವಷ್ಟು ಹಣ ಬಿಡುಗಡೆ ಮಾಡಬೇಕು, ತುಂಗಭದ್ರಾ ಕಾಲುವೆಯ ಶಾಶ್ವತ ದುರಸ್ತಿಗೆ ರಾಜ್ಯಪಾಲರು ಗಮನ ನೀಡಬೇಕು ಎಂಬುದರ ಕುರಿತ ಕಾರ್ಯಕಾರಿಣಿಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು ಎಂದು ತಿಳಿದುಬಂದಿದೆ.
|