ಪಕ್ಷದ ರಾಷ್ಟ್ತ್ರೀಯ ಕಾರ್ಯಕಾರಿಣಿ ತೀರ್ಮಾನಿಸಿದಂತೆ ಕೆಲಸ ನಿರ್ವಹಿಸುತ್ತಿದ್ದೇವೆಯೇ ಹೊರತು ಪಕ್ಷದ ರಾಜ್ಯ ಘಟಕದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡರು ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಸಮಾವೇಶಕ್ಕೆ ಬಂದಿದ್ದ ಅವರು ಅದಕ್ಕೆ ಪೂರ್ವಭಾವಿಯಾಗಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ಉತ್ತರ ಕರ್ನಾಟಕ ವಲಯವನ್ನು ನಾವು ನಿರ್ಲಕ್ಷ್ಯ ಮಾಡಿಲ್ಲ. ಮುಂಬರಲಿರುವ ಚುನಾವಣೆಯಲ್ಲಿ ಈ ವಲಯಕ್ಕೆ ಹಾಗೂ ಹೊಸಬರಿಗೆ ಪ್ರಾಮುಖ್ಯತೆ ನೀಡಲಾಗುತ್ತದೆ ಎಂದು ತಿಳಿಸಿದ ಸದಾನಂದ ಗೌಡರು ತಮ್ಮ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರುವವರಿಗೆ ಸ್ವಾಗತವಿದೆ ಎಂದು ನುಡಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವರಾದ ಕಟ್ಟಾ ಸುಬ್ರಮಣ್ಯ ನಾಯ್ಡು, ಆರ್.ಅಶೋಕ್, ಸಂಸದ ವಿಜಯ ಶಂಕರ್, ಮಾಜಿ ಶಾಸಕ ಎ.ರಾಮರಾವ್ ಹಾಜರಿದ್ದರು.
|