ಮೂರು ದಿನಗಳ ಕಾಲ ಅದ್ದೂರಿಯಾಗಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಳೆ(ಶನಿವಾರ) ತೆರೆ ಬೀಳಲಿದೆ.
ನಾಳೆ ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ಕೇಂದ್ರ ಯೋಜನಾ ಖಾತೆ ಸಚಿವ ಎಂ.ವಿ.ರಾಜಶೇಖರನ್ ಸಮಾರೋಪ ಭಾಷಣ ಮಾಡಲಿದ್ದಾರೆ. ಇದಕ್ಕೂ ಮುಂಚೆ ಸಂಜೆ 5 ಗಂಟೆಗೆ ಬಹಿರಂಗ ಅಧಿವೇಶನ ನಡೆಯಲಿದ್ದು ಪರಿಷತ್ತಿನ ಘಟಕಗಳ ಪದಾಧಿಕಾರಿಗಳಿಗೆ ಲಿಕನ್ನಡ ಶ್ರೀಳಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಪುಂಡಲೀಕ ಹಾಲಂಬಿ ನಿರ್ಣಯ ಮಂಡಿಸಲಿದ್ದಾರೆ.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಪ್ರೊ.ಚಂದ್ರಶೇಖರ ಪಾಟೀಲರು(ಚಂಪಾ) ವಹಿಸಲಿದ್ದು ರಾಜಕೀಯ ಧುರೀಣರಾದ ಎನ್.ಧರಂಸಿಂಗ್, ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಎಂ.ಪಿ.ಪ್ರಕಾಶ್, ಸಿದ್ಧರಾಮಯ್ಯ, ಗುರುಪಾದಪ್ಪ ನಾಗಮಾರಪಲ್ಲಿ ಮೊದಲಾದವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸಮಾರೋಪ ಸಮಾರಂಭಕ್ಕೆ ಒಂದು ಲಕ್ಷಕ್ಕೂ ಹೆಚ್ಚಿನ ಸಾಹಿತ್ಯಾಭಿಮಾನಿಗಳು ಬರುವ ನೀರೀಕ್ಷೆಯಿದೆ. ಸಮ್ಮೇಳನ ನಾಳೆಗೆ ಮುಗಿಯುವ ಹಿನ್ನೆಲೆಯಲ್ಲಿ ಪುಸ್ತಕ ವ್ಯಾಪಾರದಲ್ಲಿ ಇಂದು ಸ್ವಲ್ಪ ಚೇತರಿಕೆ ಕಂಡುಬಂದಿದೆ. ಮೊದಲೆರಡು ದಿನ ಪುಸ್ತಕ ಖರೀದಿಯೆಡೆಗೆ ಓದುಗರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು ಎಂಬುದನ್ನಿಲ್ಲಿ ಸ್ಮರಿಸಿಕೊಳ್ಳಬಹುದು.
|