ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ನಂತರ ಯಾವ ಪಕ್ಷ ಸೇರಬೇಕು ಎಂಬುದನ್ನು ತಾವು ನಿರ್ಧರಿಸುವುದಾಗಿ ಮಾಜಿ ಸಚಿವ ಎಂ.ಪಿ.ಪ್ರಕಾಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಈ ಫಲಿತಾಂಶ ಇಡೀ ರಾಷ್ಟ್ತ್ರದ ಚುನಾವಣಾ ವ್ಯವಸ್ಥೆ ಮೇಲೆ ಪರಿಣಾಮ ಬೀರಲಿದೆ. ಆದ್ದರಿಂದ ಎಲ್ಲ ಸಮಾನ ಮನಸ್ಕರ ಜತೆ ಚರ್ಚಿಸಿದ ನಂತರವೇ ತೀರ್ಮಾನ ಮಾಡುವುದಾಗಿ ತಿಳಿಸಿದರು.
ಜಿ.ಟಿ.ದೇವೇಗೌಡ ಕೂಡ ತಮ್ಮ ಜೊತೆ ಮಾತಾಡಿದ್ದಾರೆ ಎಂಬ ವಿಷಯ ಸ್ಪಷ್ಟಪಡಿಸಿದ ಪ್ರಕಾಶ್ ಜೆಡಿಎಸ್ ರಾಜ್ಯಾಧ್ಯಕ್ಷ ಮೆರಾಜುದ್ದೀನ್ ಪಟೇಲ್ ತಮ್ಮ ಕುರಿತು ಆಡಿರುವ ಮಾತುಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ.
|