ಕಬ್ಬು ಖರೀದಿಯ ದರಕ್ಕೆ ಸಂಬಂಧಿಸಿ ರಾಜ್ಯದಲ್ಲಿ ಉಂಟಾಗಿರುವ ತೊಂದರೆಯನ್ನು ಇಂದು ಚರ್ಚಿಸಿ ಇತ್ಯರ್ಥ ಪಡಿಸಲಾಗುವುದು ಎಂದು ರಾಜ್ಯಪಾಲ ರಾಮೇಶ್ವರ ಠಾಕೂರ್ ತಿಳಿಸಿದ್ದಾರೆ.
ರಾಜಭವನದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಜಿ ಸಚಿವ ಎಂ.ಪಿ.ಪ್ರಕಾಶ್ ನೇತೃತ್ವದ ಕಬ್ಬು ಬೆಳೆಗಾರರ ನಿಯೋಗದೊಂದಿಗೆ ಮಾತನಾಡಿದ ಅವರು ಕಬ್ಬು ಬೆಳೆಗಾರರ ಸಮಸ್ಯೆಯನ್ನು ನಿವಾರಿಸಲಾಗುವುದು ಎಂಬ ಭರವಸೆಯನ್ನು ನೀಡಿದ್ದಾರೆಂದು ತಿಳಿದುಬಂದಿದೆ.
ಸುದ್ದಿಗಾರರಿಗೆ ಈ ವಿಷಯ ವಿವರಿಸಿದ ಪ್ರಕಾಶ್, ನಿಯಮಗಳ ಪ್ರಕಾರ ಕೇಂದ್ರ ಸರ್ಕಾರ ಪ್ರತಿ ಟನ್ ಕಬ್ಬಿಗೆ 1140 ರೂಪಾಯಿ ನಿಗದಿಪಡಿಸಿತ್ತು. ಆದರೆ 940 ರೂಪಾಯಿ ನೀಡುವುದಾಗಿ ಸರ್ಕಾರ ತಿಳಿಸಿದೆ. ಇದರಿಂದ ರೈತರಿಗೆ ಆಗುವ ನಷ್ಟವನ್ನು ರಾಜ್ಯಪಾಲರ ಗಮನಕ್ಕೆ ತಂದಿರುವುದಾಗಿ ತಿಳಿಸಿದ್ದಾರೆ.
|